ವೀರಾಜಪೇಟೆ, ಫೆ. ೪: ದ್ವಿಚಕ್ರ ವಾಹನ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಸಮೀಪದ ಕೆದಮುಳ್ಳೂರು ಗ್ರಾಮದ ಯುವಕ ಮೃತಪಟ್ಟಿದ್ದಾನೆ.
ಗ್ರಾಮದ ದರ್ಶನ್ (೧೯) ಎಂಬಾತನೇ ಮೃತಪಟ್ಟ ಯುವಕ. ತಾ. ೨ ರಂದು ಸಮೀಪದ ಕೆ.ಬೋಯಿಕೇರಿ ಬಳಿ ದರ್ಶನ್ ಚಾಲಿಸುತ್ತಿದ್ದ ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ. ಗಾಯಾಳುವಿಗೆ ವೀರಾಜಪೇಟೆಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಶನಿವಾರದಂದು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಸಾಗಿಸುವಾಗ ಗಾಯಾಳು ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಈ ಕುರಿತು ಇಲ್ಲಿನ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.