ಮಡಿಕೇರಿ, ಫೆ. ೫: ೨೦೨೨ನೇ ವರ್ಷದಲ್ಲಿ ಪದವಿ/ ಸ್ನಾತಕೊತ್ತರ ಪದವಿ ಮತ್ತು ವೃತ್ತಿಪರ ಪದವಿ/ ವೃತ್ತಿಪರ ಸ್ನಾತ್ತಕೋತ್ತರ ಪದವಿ ಪೂರ್ಣಗೊಳಿಸಿದ್ದು, ಸರಾಸರಿ ಶೇ. ೭೦ ಮತ್ತು ಅದಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿರುವ ಹಿಂದುಳಿದ ವರ್ಗಕ್ಕೆ ಸೇರಿದ ಪ್ರವರ್ಗ-೧, ೨ಎ, ೩ಎ ಹಾಗೂ ೩ಬಿ ಸಮುದಾಯದ ಅರ್ಹ ವಿದ್ಯಾರ್ಥಿಗಳಿಂದ ಡಿ. ದೇವರಾಜ ಅರಸು ಪ್ರತಿಭಾ ಪುರಸ್ಕಾರಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹತೆ ಹೊಂದಿದ ವಿದ್ಯಾರ್ಥಿಗಳು ತಾ. ೮ ರೊಳಗಾಗಿ ಅರ್ಜಿ ಸಲ್ಲಿಸಿ ಈ ಸೌಲಭ್ಯ ಪಡೆಯಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ವಿದ್ಯಾರ್ಥಿಯು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರ ಬೇಕು. ವಿದ್ಯಾರ್ಥಿಯು ಪ್ರವರ್ಗ-೧, ೨ಎ, ೩ಎ ಅಥವಾ ೩ಬಿ ಗೆ ಸೇರಿರಬೇಕು. ವಿದ್ಯಾರ್ಥಿಯು ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-೧ ಆಗಿದ್ದಲ್ಲಿ, ರೂ. ೨.೫೦ ಲಕ್ಷ, ಪ್ರವರ್ಗ-೨ಎ, ೩ಎ ಮತ್ತು ೩ಬಿ ಆಗಿದ್ದಲ್ಲಿ, ರೂ. ೧ ಲಕ್ಷ. ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ವಿವರಗಳಿಗೆ ಇಲಾಖಾ ವೆಬ್ಸೈಟ್ ವಿಳಾಸ hಣಣಠಿs://bಛಿತಿಜ. ಞಚಿಡಿಟಿಚಿಣಚಿಞಚಿ.gov.iಟಿ ಸಹಾಯ ವಾಣಿ ಸಂಖ್ಯೆ ೮೦೫೦೭೭೦೦೦೪ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಎನ್. ಮಂಜುನಾಥ್ ತಿಳಿಸಿದ್ದಾರೆ.