ಮಡಿಕೇರಿ, ಫೆ. ೫: ಕಟ್ಟಡ ಮತ್ತು ಇತರ ನಿರ್ಮಾಣ ಕೆಲಸಗಳಲ್ಲಿ ತೊಡಗಿರುವ ಜಿಲ್ಲೆಯಲ್ಲಿ ನೋಂದಾಯಿತ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ೧೦ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಶಾಸಕರಾದ ಕೆ.ಜಿ. ಬೋಪಯ್ಯ ಮತ್ತು ಎಂ.ಪಿ. ಅಪ್ಪಚ್ಚು ರಂಜನ್ ಅವರು ಶುಕ್ರವಾರ ಟ್ಯಾಬ್ ವಿತರಿಸಿದರು.

ಶಾಸಕ ಕೆ.ಜಿ. ಬೋಪಯ್ಯ ಅವರು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದ ಬಳಿ ಇರುವ ಶಾಸಕರ ಕಚೇರಿಯಲ್ಲಿ ಹಾಗೂ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು ಜಿಲ್ಲಾ ಪಂಚಾಯಿತಿಯ ಶಾಸಕರ ಕಚೇರಿ ಆವರಣದಲ್ಲಿ ಟ್ಯಾಬ್‌ಗಳನ್ನು ವಿತರಿಸಿದರು. ಮಡಿಕೇರಿ ತಾಲೂಕಿನ ವಿದ್ಯಾರ್ಥಿಗಳಿಗೆ ಒಟ್ಟು ೫೦ ಟ್ಯಾಬ್‌ಗಳನ್ನು ಶಾಸಕದ್ವಯರು ವಿತರಿಸಿದರು. ಈ ಸಂದರ್ಭ ತಾಲೂಕು ಕಾರ್ಮಿಕ ಅಧಿಕಾರಿ ಯತ್ನಟ್ಟಿ, ಇತರರು ಇದ್ದರು.