ಕುಶಾಲನಗರ, ಫೆ. ೬: ಕಾವೇರಿ ನದಿ ತೀರ ಮತ್ತು ಜಲಮೂಲಗಳ ಸಂರಕ್ಷಣೆ ಜೊತೆಗೆ ಕಲುಷಿತವಾಗದಂತೆ ಎಚ್ಚರ ವಹಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಕುಶಾಲನಗರ ಪುರಸಭೆ ಸದಸ್ಯರು ಹಾಗೂ ಶ್ರೀ ಕೋಣಮಾರಿಯಮ್ಮ ಸಮಿತಿಯ ಅಧ್ಯಕ್ಷರೂ ಆಗಿರುವ ಎಂ.ಬಿ. ಸುರೇಶ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಅವರು, ಕುಶಾಲನಗರ ಕಾವೇರಿ ಮಹಾ ಆರತಿ ಬಳಗದ ಆಶ್ರಯದಲ್ಲಿ ಶ್ರೀ ಕೋಣ ಮಾರಿಯಮ್ಮ ದೇವಾಲಯ ಸಮಿತಿ ಸಹಯೋಗದೊಂದಿಗೆ ಜೀವನದಿ ಕಾವೇರಿಗೆ ನಡೆದ ೧೪೧ನೇ ಮಹಾ ಆರತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಅಭಿವೃದ್ಧಿ ನಡುವೆ ನದಿ, ಪ್ರಕೃತಿಗೆ ಧಕ್ಕೆಯಾಗದಂತೆ ಗಮನಿಸಬೇಕಾಗಿದೆ. ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ಹಸ್ತಾಂತರಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.

ಹುಣ್ಣಿಮೆ ಅಂಗವಾಗಿ ನಡೆದ ಆರತಿ ಕಾರ್ಯಕ್ರಮದಲ್ಲಿ ಅರ್ಚಕ ಯೋಗೇಶ್ ಭಟ್ ಕುಂಕುರ್ಮಾಚನೆ, ಅಷ್ಟೋತ್ತರ ನಂತರ ನದಿಗೆ ಸಾಮೂಹಿಕವಾಗಿ ಆರತಿ ಬೆಳಗಲಾಯಿತು. ಇದೇ ಸಂದರ್ಭ ಪುರಸಭೆ ಸದಸ್ಯ ಎಂ.ಬಿ. ಸುರೇಶ್ ಅವರನ್ನು ಬಳಗದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಕೋಣಮಾರಿಯಮ್ಮ ದೇವಾಲಯ ಸಮಿತಿಯ ಉಪಾಧ್ಯಕ್ಷ ಎಂ.ಮAಜುನಾಥ್, ಕಾರ್ಯದರ್ಶಿ ಸುರೇಶ್, ಮಾಜಿ ಅಧ್ಯಕ್ಷ ಸತೀಶ್, ಆರತಿ ಬಳಗದ ಸಂಚಾಲಕಿ ವನಿತಾ ಚಂದ್ರಮೋಹನ್, ಕಾವೇರಿ ರಿವರ್ ಸೇವಾ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಮಂಡೆಪAಡ ಬೋಸ್ ಮೊಣ್ಣಪ್ಪ, ವೈಶಾಕ್, ಪ್ರವೀಣ್, ಚಂಗು ತಿಮ್ಮಪ್ಪ ಮತ್ತಿತರರು ಇದ್ದರು.