ಮಡಿಕೇರಿ, ಫೆ. ೬: ನವೆಂಬರ್ -೨೦೨೨ ರ ಅಖಿಲ ಭಾರತ ವೃತ್ತಿ ಪರೀಕ್ಷೆಗೆ ಸಂಬAಧಿಸಿದAತೆ ಫೆಬ್ರವರಿ-೨೦೨೩ ರಲ್ಲಿ ಪೂರಕ ಪರೀಕ್ಷೆಗಳು ಮಡಿಕೇರಿಯ ಕೊಡಗು ಜಿಲ್ಲೆಯ ಜಿಲ್ಲಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ತಾ. ೬ ರಿಂದ ತಾ. ೧೧ ರವರೆಗೆ ನಡೆಯಲಿದ್ದು, ಈ ಪರೀಕ್ಷೆಗಳನ್ನು ಯಾವುದೇ ಅವ್ಯವಹಾರಗಳಿಲ್ಲದಂತೆ ಸುಗಮವಾಗಿ ನಡೆಸುವ ಸಲುವಾಗಿ ದಂಡ ಪ್ರಕ್ರಿಯಾ ಸಂಹಿತೆ ೧೯೭೩ ರ ಕಲಂ ೧೪೪ ರಡಿ ದತ್ತವಾದ ಅಧಿಕಾರದಂತೆ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರು ಪರೀಕ್ಷಾ ಕೇಂದ್ರದ ಸುತ್ತಲಿನ ೨೦೦ ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿಷೇಧಿತ ಸ್ಥಳ ಎಂದು ಘೋಷಿಸಿ ಆದೇಶಿಸಿದ್ದಾರೆ.