ಕೂಡಿಗೆ, ಫೆ. ೬: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವನತ್ತೂರು ಗ್ರಾಮದ ಶ್ರೀ ಉದ್ಭವ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದಿಂದ ಹಾರಂಗಿಯ ಸಂಪರ್ಕ ರಸ್ತೆ ಮತ್ತು ನವಗ್ರಾಮದ ಉಪ ರಸ್ತೆಗಳ ಡಾಂಬರಿಕರಣಕ್ಕೆ ರೂ. ೧.೨೦ ಕೋಟಿ ವೆಚ್ಚದ ಕಾಮಗಾರಿಗಳಿಗೆ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಭೂಮಿಪೂಜೆ ನೆರವೇರಿಸಿದರು.

ನಂತರ ಮಾತನಾಡಿದ ಅವರು, ನೀರಾವರಿ ಇಲಾಖೆಯ ಮೂಲಕ ಗ್ರಾಮಾಂತರ ಪ್ರದೇಶದ ವಿವಿಧ ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನವನ್ನು ಕಾಯ್ದಿರಿಸಿದ ಹಿನ್ನೆಲೆಯಲ್ಲಿ ಗ್ರಾಮಗಳ ಸಂಪರ್ಕ ರಸ್ತೆ ಮತ್ತು ಉಪ ರಸ್ತೆಗಳ ಕಾಮಗಾರಿಗಳು ನಡೆಯುವುದರಿಂದ ಸಾರ್ವಜನಿಕರಿಗೆ ಅನುಕೂಲ ವಾಗುವುದು. ಉತ್ತಮವಾದ ಗುಣಮಟ್ಟದ ಕಾಮಗಾರಿಯನ್ನು ಮಾಡಿಸಿಕೊಳ್ಳಬೇಕು ಎಂದರು.

ಈ ಸಂದರ್ಭ ಕೂಡು ಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಇಂದಿರಾ ರಮೇಶ್, ಸದಸ್ಯರಾದ ಕೆ.ಕೆ. ಭೋಗಪ್ಪ, ಮಣಿಕಂಠ, ಕೃಷ್ಣ, ಮಾಜಿ ಸದಸ್ಯರಾದ ಸಾವಿತ್ರಿ ರಾಜನ್, ಕುಮಾರಸ್ವಾಮಿ, ಜಿಲ್ಲಾ ಕುರುಬ ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ಪ್ರಭಾಕರ್, ಕೂಡುಮಂಗಳೂರು ಶಕ್ತಿ ಕೇಂದ್ರದ ಅಧ್ಯಕ್ಷ ಮಂಜುನಾಥ, ಹೆಬ್ಬಾಲೆ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹೆಚ್.ಎಸ್. ಶ್ರೀನಿವಾಸ್ ಸೇರಿದಂತೆ ಬಿಜೆಪಿ ವಿವಿಧ ಘಟಕದ ಅಧ್ಯಕ್ಷರು, ಮಹಿಳಾ ಘಟಕದ ಅಧ್ಯಕ್ಷರು ಇದ್ದರು.