ಸೋಮವಾರಪೇಟೆ, ಫೆ. ೬: ಪಟ್ಟಣದ ಆನೆಕೆರೆಗೆ ಆಕಸ್ಮಿಕವಾಗಿ ಬಿದ್ದು ವರ್ಕ್ಶಾಪ್ ಕಾರ್ಮಿಕ ರೋರ್ವರು ದುರ್ಮರಣ ಕ್ಕೀಡಾಗಿರುವ ಘಟನೆ ನಿನ್ನೆ ರಾತ್ರಿ ನಡೆದಿದ್ದು, ಇಂದು ಬೆಳಕಿಗೆ ಬಂದಿದೆ.

ಮಾರ್ಕೆಟ್ ಏರಿಯಾದ ಬಾಬು ವರ್ಕ್ಶಾಪ್‌ನಲ್ಲಿ ಕೆಲಸ ಮಾಡಿಕೊಂಡಿದ್ದ,

(ಮೊದಲ ಪುಟದಿಂದ) ಪಟ್ಟಣದ ಬಾಡಿಗೆ ಮನೆಯೊಂದರಲ್ಲಿ ನೆಲೆಸಿದ್ದ ಧರ್ಮ (೫೫) ಎಂಬವರೇ ಸಾವನ್ನಪ್ಪಿದವರು. ನಿನ್ನೆ ರಾತ್ರಿ ಆನೆಕೆರೆಗೆ ತೆರಳಿದ್ದು, ಆಕಸ್ಮಿಕವಾಗಿ ಬಿದ್ದು ಸಾವನ್ನಪ್ಪಿರುವುದಾಗಿ ಅವರ ಸಂಬAಧಿಕರು ಪೊಲೀಸ್ ದೂರು ನೀಡಿದ್ದಾರೆ.

ವಿಪರೀತ ಮದ್ಯಪಾನ ಮಾಡುತ್ತಿದ್ದ ಧರ್ಮ ಅವರು ನಿನ್ನೆ ರಾತ್ರಿಯೂ ಮದ್ಯ ಸೇವಿಸಿದ್ದು, ಕಿಬ್ಬೆಟ್ಟದಲ್ಲಿರುವ ಸಂಬAಧಿಕರ ಮನೆಗೆ ತೆರಳುವ ಸಂದರ್ಭದಲ್ಲಿ ಕೈ ತೊಳೆಯಲೆಂದು ಆನೆಕೆರೆಗೆ ಹೋಗಿದ್ದು, ಆಕಸ್ಮಿಕವಾಗಿ ಕಾಲುಜಾರಿ ಬಿದ್ದಿರಬಹುದು ಎಂದು ಸಂಬAಧಿಕರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಇಂದು ಬೆಳಿಗ್ಗೆ ಕೆರೆಯಲ್ಲಿ ಮೃತದೇಹ ತೇಲುತ್ತಿದ್ದುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ ಮೇರೆ ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ, ಸ್ಥಳೀಯರ ಸಹಕಾರದಿಂದ ಮೃತದೇಹವನ್ನು ಹೊರತೆಗೆದರು. ಪೊಲೀಸ್ ಇನ್ಸ್ಪೆಕ್ಟರ್ ರಾಮಚಂದ್ರನಾಯಕ್, ಠಾಣಾಧಿಕಾರಿ ರಮೇಶ್‌ಕುಮಾರ್ ಅವರುಗಳು ಮೊಕದ್ದಮೆ ದಾಖಲಿಸಿಕೊಂಡಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ. ಮೃತ ಧರ್ಮ ಅವರು ಈರ್ವರು ಪುತ್ರಿಯರನ್ನು ಅಗಲಿದ್ದಾರೆ.