ಮಡಿಕೇರಿ, ಫೆ. ೬: ಸಂಜೀವಿನಿ ಕೆಎಸ್ಆರ್ಎಲ್ಪಿಎಸ್ ಸಂಸ್ಥೆಯ ವತಿಯಿಂದ ಅನುಷ್ಠಾನಗೊಳ್ಳುತ್ತಿರುವ ಎನ್ಆರ್ಎಲ್ಎಂ ಯೋಜನೆಯಡಿ ಗ್ರಾಮೀಣ ಮಹಿಳೆಯರ ಸಾಮಾಜಿಕ ಮತ್ತು ಆರ್ಥಿಕ ಬಲವರ್ಧನೆಗಾಗಿ ಸಂಜೀವಿನಿ ಸ್ವ ಸಹಾಯ ಸಂಘಗಳ ಮಹಿಳಾ ಉದ್ಯಮಿಗಳು ತಯಾರಿಸುವ ಉತ್ಪನ್ನಗಳನ್ನು ಮಾರಾಟ ಮಾಡುವ ಸಲುವಾಗಿ ಕೊಡಗು ಜಿಲ್ಲಾ ಪಂಚಾಯಿತಿ ವತಿಯಿಂದ ‘ಜಿಲ್ಲಾ ಮಟ್ಟದ ವ್ಯಾಪಾರ ಮೇಳವು’ ತಾ. ೭ ಮತ್ತು ತಾ. ೮ ರಂದು ನಗರದ ಗಾಂಧಿ ಮೈದಾನದಲ್ಲಿ ನಡೆಯಲಿದೆ.
ತಾ. ೭ ರಂದು (ಇಂದು) ಬೆಳಿಗ್ಗೆ ೧೧ ಗಂಟೆಗೆ ನಗರದ ಗಾಂಧಿ ಮೈದಾನದಲ್ಲಿ ಜಿಲ್ಲಾ ಮಟ್ಟದ ವ್ಯಾಪಾರ ಮೇಳದ ಉದ್ಘಾಟನೆ ನಡೆಯಲಿದೆ. ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಇತರರು ಪಾಲ್ಗೊಳ್ಳಲಿದ್ದಾರೆ.