ಮಡಿಕೇರಿ, ಫೆ. ೬: ಭಾರತೀಯ ಕ್ರೀಡಾ ಪ್ರಾಧಿಕಾರ(ಸಾಯಿ)ದಿಂದ ‘ಅಂತರ ದಕ್ಷಿಣ ವಲಯದ’ ಬಾಲಕಿಯರ ಹಾಕಿ ಪಂದ್ಯಾವಳಿಯು ತಾ. ೭ ಮತ್ತು ತಾ. ೮ ರಂದು ನಗರದ ಭಾರತೀಯ ಕ್ರೀಡಾ ಪ್ರಾಧಿಕಾರದ ಹಾಕಿ ಟರ್ಫ್ ಮೈದಾನದಲ್ಲಿ ನಡೆಯಲಿದೆ.
ತಾ. ೭ ರಂದು (ಇಂದು) ಮಧ್ಯಾಹ್ನ ೩ ಗಂಟೆಗೆ ಬಾಲಕಿಯರ ಹಾಕಿ ಪಂದ್ಯಾವಳಿಗೆ ಚಾಲನೆ ದೊರೆಯಲಿದೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ. ವಿಸ್ಮಯಿ ಪಂದ್ಯಾವಳಿಗೆ ಚಾಲನೆ ನೀಡಲಿದ್ದಾರೆ. ಕೇರಳದ ಕೊಲ್ಲಂ, ಹೈದರಾಬಾದ್ ಮತ್ತು ಮಡಿಕೇರಿ ಕ್ರೀಡಾ ಪ್ರಾಧಿಕಾರದ ಬಾಲಕಿಯರ ಹಾಕಿ ತಂಡಗಳು ಪಾಲ್ಗೊಳ್ಳಲಿವೆ.
ತಾ. ೮ ರಂದು ಸಂಜೆ ೫ ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಪಾಲ್ಗೊಳ್ಳಲಿದ್ದಾರೆ ಎಂದು ಭಾರತೀಯ ಕ್ರೀಡಾ ಪ್ರಾಧಿಕಾರದ ತರಬೇತಿ ಕೇಂದ್ರದ ಮೇಲ್ವಿಚಾರಕರಾದ ಮಿನಿ ಉಣ್ಣಿರಾಜ್ ತಿಳಿಸಿದ್ದಾರೆ.