ಗೋಣಿಕೊಪ್ಪ ವರದಿ, ಫೆ. ೬ : ಮಹಾ ಶಿವರಾತ್ರಿ ಪ್ರಯುಕ್ತ ಅರ್ವತೊಕ್ಕಲು ಪ್ರತಿಭಾ ಯುವಕ ಸಂಘದ ವತಿಯಿಂದ ಜಿಲ್ಲಾ ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಟೂರ್ನಿಯನ್ನು ತಾ. ೧೮ ರಂದು ಆಯೋಜಿಸಲಾಗಿದೆ ಎಂದು ಜಿಲ್ಲಾ ಯುವ ಒಕ್ಕೂಟ ಮಾಜಿ ಅಧ್ಯಕ್ಷ ಎನ್.ಎಸ್. ಕಂದಾ ದೇವಯ್ಯ ತಿಳಿಸಿದ್ದಾರೆ.
ಸಂಘದ ಮೈದಾನದಲ್ಲಿ ನಡೆಯಲಿರುವ ಟೂರ್ನಿಗೆ ಹೆಸರು ನೋಂದಾಯಿಸಿಕೊAಡು ಪಾಲ್ಗೊಳ್ಳಬಹುದಾಗಿದೆ. ಪ್ರಥಮ ರೂ. ೨೫ ಸಾವಿರ, ದ್ವಿತೀಯ ರೂ. ೧೫ ಸಾವಿರ ನಗದು ಬಹುಮಾನ ನೀಡಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಹೆಚ್ಚಿನ ಮಾಹಿತಿಗೆ ೯೯೦೦೨೭೨೧೧೩, ೮೦೮೮೬೩೦೬೭೦ ಸಂಖ್ಯೆ ಸಂಪರ್ಕಿಸಬಹುದಾಗಿದೆ. ಸಂಘದ ಸಂಘಟನಾ ಕಾರ್ಯದರ್ಶಿ ಸಕೀರ್ ಗೋಷ್ಠಿಯಲ್ಲಿದ್ದರು.