ಕೂಡಿಗೆ, ಫೆ. ೭: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ೧ನೇ ವಾರ್ಡ್ನಲ್ಲಿ ಬಿಜೆಪಿ ಬೂತ್ ಅಭಿಯಾನ ಕಾರ್ಯಕ್ರಮವನ್ನು ನಡೆಸಲಾಯಿತು.
ತೊರೆನೂರು ಶಕ್ತಿ ಕೇಂದ್ರದ ಉಪಾಧ್ಯಕ್ಷ ರವಿಚಂದ್ರ ಅವರ ನೇತೃತ್ವದಲ್ಲಿ ೧ನೇ ವಾರ್ಡ್ನ ಅನೇಕ ಮನೆಗಳಿಗೆ ತೆರಳಿ ಕೇಂದ್ರ ಮತ್ತು ರಾಜ್ಯ ಸರಕಾರದ ಸಾಧನೆ ಕರಪತ್ರ ಮತ್ತು ಯೋಜನೆ, ವಿವಿಧ ಉದ್ದೇಶಗಳ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭ ವಾರ್ಡ್ನ ಬೂತ್ ಅಧ್ಯಕ್ಷ ಯೋಗೇಶ್, ಕಾರ್ಯದರ್ಶಿ ಕೆ.ಎಸ್. ಪ್ರಭು, ಪಕ್ಷದ ಪ್ರಮುಖರಾದ ಸುಬ್ಬಯ್ಯ, ಸಂತೋಷ ಸೇರಿದಂತೆ ಹಲವಾರು ಮಂದಿ ಹಾಜರಿದ್ದರು.