ವೀರಾಜಪೇಟೆ, ಫೆ. ೭: ವೀರಾಜ ಪೇಟೆ ತಾಲೂಕಿನ ಬೇಟೋಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸ.ಹಿ.ಪ್ರಾ. ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಎಸ್ಡಿಎಂಸಿ ಅಧ್ಯಕ್ಷ ಎಂ.ಎA. ಇಸ್ಮಾಯಿಲ್, ಮಕ್ಕಳು ಹೆಚ್ಚಿನ ಸಮಯ ಶಿಕ್ಷಕರೊಂದಿಗೆ ಶಾಲೆಯಲ್ಲಿ ಕಳೆಯುತ್ತಾರೆ. ಮಕ್ಕಳ ಉತ್ತಮ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವಂತೆ ಶಿಕ್ಷಕರಿಗೆ ಹೇಳಿದರು.
ಮಕ್ಕಳಿಗೆ ಪಠ್ಯಕ್ರಮ ಎಷ್ಟು ಮುಖ್ಯವೋ ಪಠ್ಯೇತರ ಚಟುವಟಿಕೆ ಅಷ್ಟೇ ಮುಖ್ಯ. ಪ್ರತಿಯೊಬ್ಬ ವಿದ್ಯಾರ್ಥಿ ಶಿಕ್ಷಣದೊಂದಿಗೆ ಕ್ರೀಡೆ, ಸಾಂಸ್ಕöÈತಿಕ ಚಟುವಟಿಕೆಯಲ್ಲಿ ಪಾಲ್ಗೊಳ್ಳಬೇಕು. ಉತ್ತಮ ಶಿಕ್ಷಣ ದೊಂದಿಗೆ ಉತ್ತಮ ದೇಹದಾರ್ಡ್ಯ ಹಾಗೂ ಆರೋಗ್ಯ ಹೊಂದುವAತೆ ತಿಳಿಸಿದರಲ್ಲದೆ ಈ ಶಾಲೆಯಲ್ಲಿ ೮ನೇ ತರಗತಿವರೆಗೆ ಮಾತ್ರ ಕಲಿಯಲು ಅವಕಾಶವಿದ್ದು ೯ನೇ ತರಗತಿಗೆ ಬೇರೆಡೆಗೆ ತೆರಳಬೇಕಾದ ಅನಿವಾರ್ಯತೆ ಇದೆ. ಇದೆ ಶಾಲೆಯಲ್ಲಿ ೧೦ನೇ ತರಗತಿವರೆಗೆ ವ್ಯಾಸಂಗ ಮಾಡಲು ಅವಕಾಶ ಕಲ್ಪಿಸುವಂತಾಗಬೇಕು ಎಂದು ಮನವಿ ಮಾಡಿದರು. ಬೇಟೊಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಯಶೋಧಾ ಮ್ಯಾರಾಥಾನ್ ಉದ್ಘಾಟಿಸಿದರೆ, ಪಂಚಾಯಿತಿ ಸದಸ್ಯ ಅಮ್ಮಣಕುಟ್ಟಂಡ ವಸಂತ ಕಟ್ಟಿ ಕ್ರೀಡಾ ಜ್ಯೋತಿ ಬೆಳಗಿದರು. ಶಾಲಾ ಸ್ಥಳ ದಾನಿಗಳಾದ ಧÀರ್ಮೇಶ್ ಹಾಗೂ ಗುಂಡಿಗೆರೆ ಜಮಾಅತ್ನ ಅಧ್ಯಕ್ಷ ಮಹಮ್ಮದ್ ಹಾಜಿ, ಬೇಟೋಳಿ ಪಂಚಾಯಿತಿ ಗ್ರಾಮಭಿವೃದ್ಧಿ ಅಧಿಕಾರಿ ಎಂ. ಮಣಿ, ಪಂಚಾಯಿತಿ ಸದಸ್ಯ ರಜಾಕ್, ಮಾಜಿ ಸದಸ್ಯ ಉಮ್ಮರ್ ಫಾರೂಕ್, ಎಸ್ಡಿಎಂಸಿ ಉಪಾಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕಿ ಸೀತಾ ಸ್ವಾಗತಿಸಿದರೆ, ಸಹ ಶಿಕ್ಷಕಿ ಸುಜಾತಾ ನಿರೂಪಿಸಿದರು. ದೈಹಿಕ ಶಿಕ್ಷಕ ತಿಮ್ಮಯ್ಯ ಸಾಮೂಹಿಕ ಕವಾಯತು ನಡೆಸಿದರು ಊರಿನ ದಾನಿಗಳು ಶಾಲೆಗೆ ಸುಣ್ಣ ಬಣ್ಣ ಮಾಡಿಸಿ ಮಕ್ಕಳಿಗೆ, ಸಾರ್ವಜನಿಕರಿಗೆ ಕ್ರೀಡಾಕೂಟದಲ್ಲಿ ಭಾಗವಹಿಸಿ ವಿಜೇತರಾದವರಿಗೆ ಬಹುಮಾನ ನೀಡಿದರು.
ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕ ಶಿಕ್ಷಕಿಯರು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು. ಈ ಸಂದರ್ಭ ಶಾಲಾ ಮಕ್ಕಳು ಮನರಂಜನೆ ಕಾರ್ಯಕ್ರಮ ನಡೆಸಿಕೊಟ್ಟರು.