ಪೂರ್ವಭಾವಿ ಸಭೆ
ಗೋಣಿಕೊಪ್ಪಲು, ಫೆ. ೭: ನೂತನ ಪೊನ್ನಂಪೇಟೆ ತಾಲೂಕು ರಚನೆಯಾದ ಬಳಿಕ ಮೊದಲನೆಯ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ವನ್ನು ಗೋಣಿಕೊಪ್ಪಲಿನಲ್ಲಿ ಆಚರಿ ಸುತ್ತಿರುವುದು ಕನ್ನಡಿಗರೆಲ್ಲರಿಗೂ ಹೆಮ್ಮೆಯ ವಿಚಾರ; ಇದನ್ನು ಅಭೂತಪೂರ್ವಾಗಿ ನಡೆಸಬೇಕು. ಸರಕಾರ ಈ ಸಮ್ಮೇಳನಕ್ಕೆ ರೂ. ೫ ಲಕ್ಷ ಅನುದಾನ ನೀಡುತ್ತಿದ್ದು ಉಳಿದಂತೆ ಸಂಪನ್ಮೂಲಗಳನ್ನು ಸಂಗ್ರಹಿಸಿ ಅಚ್ಚುಕಟ್ಟಾದ ಸಮ್ಮೇಳನ ನಡೆಸಬೇಕು ಎಂದು ಶಾಸಕ ಕೆ.ಜಿ. ಬೋಪಯ್ಯ ಅಭಿಪ್ರಾಯಪಟ್ಟರು.
ಜಿಲ್ಲಾ ಸಾಹಿತ್ಯ ಸಮ್ಮೇಳನ ಸಂಬAಧ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಸಾಪ ಜಿಲ್ಲಾಧ್ಯಕ್ಷ ಎಂ.ಪಿ. ಕೇಶವ ಕಾಮತ್ ಮಾತನಾಡಿ, ಈಗಾಗಲೇ ಜಿಲ್ಲಾ ಕಾರ್ಯಕಾರಿ ಸಭೆಯಲ್ಲಿ ಗೋಣಿಕೊಪ್ಪಲಿನಲ್ಲಿ ೧೬ನೇ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ವನ್ನು ಸ್ಥಳೀಯರ ಸಹಕಾರದೊಂದಿಗೆ ನಡೆಸುವಂತೆ ತೀರ್ಮಾನಿಸಿದ ಕಾರಣ ಈ ಸಭೆ ಕರೆಯಲಾಗಿದೆ ಗೋಣಿ ಕೊಪ್ಪಲಿನ ಸಹೃದಯಿ ಕನ್ನಡಿಗರು, ಸಂಘ-ಸAಸ್ಥೆಗಳ ಪ್ರಮುಖರು, ತಾಲೂಕಿನ ಶಾಲಾ-ಕಾಲೇಜುಗಳ ಮುಖ್ಯೋಪಾಧ್ಯಾಯರು, ಅಧ್ಯಾಪಕ ವೃಂದ, ಆಡಳಿತ ಮಂಡಳಿ, ವಿದ್ಯಾರ್ಥಿಗಳು, ತಾಲೂಕಿನ ಗ್ರಾ.ಪಂ.ಗಳ ಅಧ್ಯಕ್ಷರು, ಸದಸ್ಯರು, ಸಹಕಾರ ಸಂಘಗಳ ಅಧ್ಯಕ್ಷರು, ಸದಸ್ಯರು, ಆಟೋ ಮತ್ತು ವಾಹನ ಚಾಲಕರ ಮಾಲೀಕರ ಸಂಘಗಳ ಸದಸ್ಯರು, ಸ್ತಿçà ಶಕ್ತಿ ಒಕ್ಕೂಟ, ಸಂಜೀವಿನಿ ಒಕ್ಕೂಟ, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಸದಸ್ಯರು, ಯುವಕ ಯುವತಿ ಮಂಡಳಿಗಳ ಸದಸ್ಯರು ಎಲ್ಲರ ಸಹಕಾರದೊಂದಿಗೆ ಜಿಲ್ಲಾ ಸಮ್ಮೇಳನವನ್ನು ಗೋಣಿಕೊಪ್ಪಲಿನಲ್ಲಿ ನಡೆಸಲು ಆಯೋಜಿಸಿದ್ದು ಊರಿನ ಪ್ರಮುಖರು ಒಪ್ಪಿಗೆ ನೀಡಬೇಕೆಂದು ಕೋರಿದರು. ನೆರೆದ ಸಭಿಕರು ಕರತಾಡನ ಮಾಡುವ ಮೂಲಕ ಕಾರ್ಯಕ್ರಮವನ್ನು ಗೋಣಿಕೊಪ್ಪಲಿ ನಲ್ಲಿ ನಡೆಸಲು ಸಹಕಾರ ನೀಡುವ ಕುರಿತು ಒಪ್ಪಿಗೆ ನೀಡಿದರು.
ಮಾರ್ಚ್ ತಿಂಗಳ ೪ ಮತ್ತು ೫ ರಂದು ಗೋಣಿಕೊಪ್ಪಲಿನ ಸರಕಾರಿ ಶಾಲಾ ಮೈದಾನದಲ್ಲಿ ಸಮ್ಮೇಳನ ನಡೆಸುವಂತೆ ತೀರ್ಮಾನಿಸಲಾಯಿತು.
ಪದಾಧಿಕಾರಿಗಳ ನೇಮಕ
ಹದಿನಾರನೇ ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಶಾಸಕ ಕೆ.ಜಿ. ಬೋಪಯ್ಯ ಅವರನ್ನು ಆಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ಉಸ್ತುವಾರಿ ಸಚಿವ ಬಿ.ಸಿ. ನಾಗೇಶ್, ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುಜಾ ಕುಶಾಲಪ್ಪ, ಕಾರ್ಯಾಧ್ಯಕ್ಷ ರಾಗಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್, ಮಹಾಪ್ರಧಾನ ಕಾರ್ಯದರ್ಶಿಯಾಗಿ ಪೊನ್ನಂಪೇಟೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೋಳೆರ ದಯಾ ಚಂಗಪ್ಪ, ಪ್ರಧಾನ ಕಾರ್ಯದರ್ಶಿಗಳಾಗಿ ಜಿಲ್ಲಾ ಜಿಲ್ಲಾ ಗೌರವ ಕಾರ್ಯದರ್ಶಿಗಳಾದ ಎಸ್.ಐ. ಮುನೀರ್ ಅಹಮದ್, ಪುದಿಯನೆರವನ ರೇವತಿ ರಮೇಶ್, ವೀರಾಜಪೇಟೆ ತಾಲೂಕು ಅಧ್ಯಕ್ಷ ಡಿ. ರಾಜೇಶ್ ಪದ್ಮನಾಭ, ಮಡಿಕೇರಿ ತಾಲೂಕು ಅಧ್ಯಕ್ಷ ಅಂಬೆಕಲ್ ನವೀನ್, ಸೋಮವಾರಪೇಟೆ ತಾಲೂಕು ಅಧ್ಯಕ್ಷ ಎಸ್.ಡಿ. ವಿಜೇತ್, ಕುಶಾಲನಗರ ತಾಲೂಕು ಅಧ್ಯಕ್ಷ ಕೆ.ಎಸ್. ಮೂರ್ತಿಯವರನ್ನು ಆರಿಸ ಲಾಯಿತು.
ಜಿಲ್ಲಾ ಸಹ ಕಾರ್ಯ ದರ್ಶಿಗಳಾದ ಕುಮಾರ್, ಡೆನ್ನಿಸ್ ಡಿಸೋಜ, ಸಂಘಟನಾ ಕಾರ್ಯ ದರ್ಶಿಗಳಾದ ಎಂ.ಇ. ಮೊಹಿದ್ದಿನ್, ಆರ್.ಪಿ. ಚಂದ್ರಶೇಖರ್ ಮತ್ತು ಹೋಬಳಿ ಅಧ್ಯಕ್ಷರುಗಳನ್ನು ಕಾರ್ಯ ದರ್ಶಿಗಳಾಗಿ ಆರಿಸಲಾಯಿತು. ಕೋಶಾಧಿಕಾರಿ ಯಾಗಿ ಪೊನ್ನಂಪೇಟೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ ಮತ್ತು ಜಿಲ್ಲಾ ಕೋಶಾಧಿಕಾರಿ ಎಂ.ಬಿ. ಜೋಯಪ್ಪ ಮಹಾ ಪೋಷಕರುಗಳಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಮತ್ತು ಪೋಷಕರುಗಳಾಗಿ ತಾಲೂಕು ಮಟ್ಟದ ಅಧಿಕಾರಿಗಳನ್ನು ಆರಿಸ ಲಾಯಿತು. ಕಾರ್ಯಕ್ರಮದ ಅಚ್ಚುಕಟ್ಟು ಮತ್ತು ಯಶಸ್ಸಿಗೆ ಅನುಕೂಲವಾಗುವಂತೆ ಹಲವಾರು ಸಮಿತಿಗಳನ್ನು ರಚಿಸಲಾಯಿತು. ಸಂಘ-ಸAಸ್ಥೆಗಳ ಪ್ರಮುಖರು ಭಾಗವಹಿಸಿ ಅಭಿಪ್ರಾಯ ನೀಡಿದರು.
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಜಿಲ್ಲಾಧ್ಯಕ್ಷ ಟಿ.ಪಿ. ರಮೇಶ್ ಮಾತನಾಡಿ, ಸಮ್ಮೇಳನದ ಉದ್ದೇಶ, ಆಯೋಜನೆ ಮಾಡುವ ರೀತಿಯ ಕುರಿತು ಹೇಳಿದರು.
ವೇದಿಕೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕ ಭವನದ ಸಂಚಾಲಕ ಕೊಳ್ಳಿಮಾಡ ಅಜಿತ ಅಯ್ಯಪ್ಪ, ತಾಲೂಕು ಸಾಗುವಳಿ ಸಕ್ರಮೀಕರಣ ಸಮಿತಿಯ ಅಧ್ಯಕ್ಷ ಕಾಡ್ಯಮಾಡ ಗಿರೀಶ್ ಗಣಪತಿ, ಗೋಣಿಕೊಪ್ಪಲು ಗ್ರಾ.ಪಂ. ಅಧ್ಯಕ್ಷೆ ಮನ್ನಕ್ಕಮನೆ ಸೌಮ್ಯ ಬಾಲು, ವೀರಾಜಪೇಟೆ ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ಕೊಣಿಯಂಡ ಅಪ್ಪಣ್ಣ, ಪೊನ್ನಂಪೇಟೆ ಹೋಬಳಿ ಕಸಾಪ ಮಾಜಿ ಅಧ್ಯಕ್ಷ ಬಿ.ಎನ್. ಪ್ರಕಾಶ್, ಜಿಲ್ಲೆ, ತಾಲೂಕು, ಹೋಬಳಿ ಸಮಿತಿ ಪದಾಧಿಕಾರಿಗಳು, ಸದಸ್ಯರು ಗಳು, ವಿವಿಧ ಸಂಘ-ಸAಸ್ಥೆಗಳ ಪ್ರಮುಖರು ಸಭೆಯಲ್ಲಿ ಭಾಗವಹಿಸಿದ್ದರು.