ಸುಂಟಿಕೊಪ್ಪ, ಫೆ. ೭: ಅಡುಗೆ ಅನಿಲ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟಿರುವ ಘಟನೆ ನಡೆದಿದೆ. ನಂಜನಗೂಡು ನಿವಾಸಿ ಜಯಸೂರ್ಯ (೨೫) ಮೃತ ದುದೆೆÊðವಿ. ತಾ. ೬ ರಂದು ಸಂಜೆ ೫ ಗಂಟೆ ಸಮಯದಲ್ಲಿ ಸುಂಟಿಕೊಪ್ಪ ಸಮೀಪದ ಶಾಂತಿಗೇರಿ ಬಳಿ ಮೈಸೂರಿನಿಂದ ಮಂಗಳೂರಿಗೆ ಅಡುಗೆ ಅನಿಲದ ಖಾಲಿ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ಲಾರಿಯ ಮುಂಭಾಗಕ್ಕೆ ಸುಂಟಿಕೊಪ್ಪದಿAದ ಕುಶಾಲನಗರ ಕಡೆಗೆ ತೆರಳುತ್ತಿದ್ದ ಹೀರೋ ಹೊಂಡ ಬೈಕ್ ಡಿಕ್ಕಿಯಾಗಿದೆ. ಪರಿಣಾಮ ಸವಾರ ಜಯಸೂರ್ಯ ಹೆಲ್ಮೆಟ್ ಧರಿಸದಿದ್ದ ಕಾರಣ ಮುಖ ಹಾಗೂ ತಲೆಯ ಭಾಗಕ್ಕೆ ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣ ಮಡಿಕೇರಿ ಜಿಲ್ಲಾಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿ ನಂತರ ಮೈಸೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ ಮೃತಪಟ್ಟಿದ್ದಾರೆ. ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.