ಮಡಿಕೇರಿ, ಫೆ. ೭: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಿಂದುಳಿದ ವರ್ಗಗಳ ವಿಭಾಗದ ಪದಾಧಿಕಾರಿಗಳಾಗಿ ಜಿಲ್ಲೆಯ ಮೂವರು ನೇಮಕಗೊಂಡಿದ್ದಾರೆ.
ರಾಜ್ಯ ಉಪಾಧ್ಯಕ್ಷರಾಗಿ ಕೆ.ಎಂ. ಬಾಲಕೃಷ್ಣ, ಪ್ರಧಾನ ಕಾರ್ಯದರ್ಶಿಯಾಗಿ ಎಂ.ಬಿ. ಜಾಯ್, ಕಾರ್ಯದರ್ಶಿಯಾಗಿ ಟಿ.ಎಂ. ಮುದ್ದಯ್ಯ ಅವರುಗಳನ್ನು ನೇಮಕ ಮಾಡಲಾಗಿದೆ. ಜಿಲ್ಲಾ ಅಧ್ಯಕ್ಷರ ಶಿಫಾರಸ್ಸಿನ ಮೇರೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಈ ನೇಮಕಾತಿ ಮಾಡಿ ಆದೇಶ ಹೊರಡಿಸಿದ್ದಾರೆ.