ಮಡಿಕೇರಿ, ಫೆ. ೭ : ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ನಿರುದ್ಯೋಗಿ ಯುವಕ/ಯುವತಿಯರಿಗೆ ಎನ್ಎಬಿಎಚ್ ನಿಂದ ಮಾನ್ಯತೆ ಪಡೆದ ಎಚ್ಸಿಜಿಎಲ್ ಹಾಸ್ಪಿಟಲ್ ಮೂಲಕ ಶೇ.೭೫ ಉದ್ಯೋಗ ಖಾತರಿಯೊಂದಿಗೆ ೧೦ನೇ ತರಗತಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ನಾನ್ ಪ್ಯಾರಾಮೆಡಿಕಲ್ ಅಲ್ಪಾವಧಿ ಸರ್ಟಿಫಿಕೇಟ್ ಕೋರ್ಸ್ಗಳಿಗೆ ಮೂರು ತಿಂಗಳ ವಸತಿ ಸಹಿತ ತರಬೇತಿ ನೀಡುವ ಸಂಬAಧ ಅರ್ಹ ಅಭ್ಯರ್ಥಿಗಳಿಂದ ಆನ್-ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ತಾ. ೧೩ ಕೊನೆಯ ದಿನವಾಗಿದೆ. ಹೆಚ್ಚಿನ ವಿವರಗಳಿಗೆ ಇಲಾಖೆಯ ವೆಬ್ಸೈಟ್ ತಿತಿತಿ.sತಿ.ಞಚಿಡಿ.ಟಿiಛಿ.iಟಿ ನ್ನು ಸಂಪರ್ಕಿಸಬಹುದು ಎಂದು ಪೊನ್ನಂಪೇಟೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.