ಕುಶಾಲನಗರ, ಫೆ. ೭: ಕುಶಾಲನಗರ ವಿವೇಕಾನಂದ ಪಿ.ಯು. ಕಾಲೇಜಿನಲ್ಲಿ ಏರ್ಪಡಿಸಲಾದ ಬೀಳ್ಕೊಡುಗೆ ಸಮಾರಂಭದಲ್ಲಿ ಕುಶಾಲನಗರ ಪಟ್ಟಣ ಪಂಚಾಯಿತಿಯಲ್ಲಿ ನಿವೃತ್ತರಾದ ಹಿರಿಯ ಪೌರಕಾರ್ಮಿಕರನ್ನು ಸನ್ಮಾನಿಸಿ, ಗೌರವಿಸಲಾಯಿತು.
ಕಾರ್ಮಿಕರಾದ ಆಂಜನೇಯ ಮತ್ತು ರಾಮಸ್ವಾಮಿ ದಂಪತಿಯನ್ನು ವಿವೇಕಾನಂದ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಎನ್.ಎನ್. ಶಂಭುಲಿAಗಪ್ಪ ನೇತೃತ್ವದಲ್ಲಿ ಸನ್ಮಾನಿಸಲಾಯಿತು.
ಪಿರಿಯಾಪಟ್ಟಣ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ದೇವರಾಜು, ಶಿರಂಗಾಲ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಹಂಡ್ರAಗಿ ನಾಗರಾಜು, ವಿವೇಕಾನಂದ ಕಾಲೇಜಿನ ಪ್ರಾಂಶುಪಾಲೆ ಕ್ಲಾರಾರೇಷ್ಮ, ಎಂಜಿಎA ಪದವಿ ಕಾಲೇಜಿನ ಪ್ರಾಂಶುಪಾಲೆ ಟಿ.ಎ. ಲಿಖಿತ ಮತ್ತಿತರರು ಇದ್ದರು.