ಮಡಿಕೇರಿ, ಫೆ. ೭ : ಕೊಡಗು ಜಿಲ್ಲಾ ಪಂಚಾಯಿತಿ, ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಸಂಜೀವಿನಿ-ಡೇ ನಲ್ಮ್ (ಎನ್‌ಆರ್‌ಎಲ್‌ಎಂ) ಯೋಜನೆ ಯಡಿ ಎರಡು ದಿನಗಳ ಕಾಲ ನಗರದ ಗಾಂಧಿ ಮೈದಾನದಲ್ಲಿ ಏರ್ಪಡಿಸಲಾಗಿರುವ ಜಿಲ್ಲಾ ಮಟ್ಟದ ಸ್ವಸಹಾಯ ಗುಂಪುಗಳ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಜೀವ ವೈವಿಧ್ಯ ಮಂಡಳಿ ರಾಜ್ಯ ಅಧ್ಯಕ್ಷÀ ನಾಪಂಡ ರವಿ ಕಾಳಪ್ಪ ಮತ್ತು ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಚಾಲನೆ ನೀಡಿದರು.

ಮಳಿಗೆಗಳನ್ನು ವೀಕ್ಷಿಸಿ, ಮಾಹಿತಿ ಪಡೆದ ರವಿ ಕಾಳಪ್ಪ ಅವರು ಸ್ತಿçà ಶಕ್ತಿ ಸಂಜೀವಿನಿ ಗುಂಪುಗಳಿಗೆ ಸರ್ಕಾರದ ವತಿಯಿಂದ ಸಹಾಯಧನ ಕಲ್ಪಿಸಿ ಆರ್ಥಿಕ ಉತ್ತೇಜನಕ್ಕೆ ಮುಂದಾಗಲಾಗಿದೆ. ಆ ನಿಟ್ಟಿನಲ್ಲಿ ಸ್ತಿçà ಶಕ್ತಿ ಸಂಜೀವಿನಿ ಗುಂಪುಗಳು ಉತ್ಪಾದಿಸಿದ ವಿವಿಧ ರೀತಿಯ ಉತ್ಪನ್ನಗಳು ಹಾಗೂ ಬೆಳೆದ ತರಕಾರಿ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದರಿಂದ ಕುಟುಂಬದ ಆರ್ಥಿಕ ನಿರ್ವಹಣೆಗೆ ಸಹಕಾರಿಯಾಗಲಿದೆ.

ಗ್ರಾ.ಪಂ. ಮಟ್ಟದಲ್ಲಿಯೂ ಸಹ ಇಂತಹ ಮೇಳಗಳನ್ನು ಆಯೋಜಿಸಲಾಗುತ್ತಿದೆ. ನರ್ಸರಿ, ತರಕಾರಿ, ತಿಂಡಿ ತಿನಿಸು, ಹಪ್ಪಳ, ಜ್ಯೂಸ್ ಹೀಗೆ ಎಲ್ಲಾ ರೀತಿಯ ಉತ್ಪöನ್ನಗಳನ್ನು ಮಾರಾಟ ಮಾಡಿ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗಲಿದೆ. ಇದರಿಂದ ರಾಷ್ಟçದ ಅಭಿವೃದ್ಧಿ ಸಾಧ್ಯ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಮಾತನಾಡಿ ರಾಷ್ಟಿçÃಯ ಗ್ರಾಮೀಣ ಜೀವನೋಪಾಯ ಅಭಿಯಾನ (ಎನ್‌ಆರ್‌ಎಲ್‌ಎಂ) ಯೋಜನೆ ಯಡಿ ಗ್ರಾಮೀಣ ಪ್ರದೇಶದ ರೈತ ಮಹಿಳೆಯರ ಜೀವನೋಪಾಯಕ್ಕಾಗಿ ಆದಾಯ ದ್ವಿಗುಣಗೊಳಿಸಲು ಕೃಷಿ ಜೀವನೋಪಾಯ ಚಟುವಟಿಕೆಗಳನ್ನು ಅನುಷ್ಠಾನ ಮಾಡಲಾಗುತ್ತಿದೆ ಎಂದರು.

ಸಣ್ಣ ಹಾಗೂ ಅತಿ ಸಣ್ಣ ರೈತ ಮಹಿಳೆಯರು ತಾವು ಉತ್ಪಾದಿಸುವ ಕೃಷಿ ಉತ್ಪನ್ನ ವಸ್ತುಗಳಿಗೆ ಮಾರುಕಟ್ಟೆ ಸೌಲಭ್ಯವನ್ನು ಕಲ್ಪಿಸಲಾಗುತ್ತಿದೆ. ಕೃಷಿ ಜೊತೆಗೆ ಉಪ ಕಸುಬುಗಳನ್ನು ಕೈಗೊಂಡು ಸ್ತಿçÃಶಕ್ತಿ ಗುಂಪುಗಳು ಉತ್ಪಾದಿಸಿದ ಉತ್ಪನ್ನಗಳನ್ನು ಮಾರಾಟಕ್ಕೆ ಅವಕಾಶ ಕಲ್ಪಿಸುವುದು ಇದರ ಉದ್ದೇಶವಾಗಿದೆ. ಸುಮಾರು ೫೦ ಮಳಿಗೆಗೆ ಅವಕಾಶ ಮಾಡಲಾಗಿದೆ ಎಂದರು.

ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ ಮಾತನಾಡಿ ಸ್ತಿçÃಶಕ್ತಿ ಗುಂಪುಗಳು ಜಿಲ್ಲೆಯಲ್ಲಿ ಕ್ರೀಯಾಶೀಲ ಚಟುವಟಿಕೆಯಿಂದ ವಿವಿಧ ಸ್ವ ಉದ್ಯೋಗ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿವೆ. ಆ ನಿಟ್ಟಿನಲ್ಲಿ ಸ್ತಿçÃಶಕ್ತಿ ಸ್ವಸಹಾಯ ಸಂಘಗಳು ತಯಾರಿಸಿದ ಉತ್ಪನ್ನಗಳ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಸ್ತಿçÃಶಕ್ತಿ ಮಹಿಳಾ ಒಕ್ಕೂಟದ ರಾಜ್ಯ ಮತ್ತು ಜಿಲ್ಲಾ ಅಧ್ಯಕ್ಷೆÀ ರೆಹನಾ ಸುಲ್ತಾನ, ಪೊನ್ನಂಪೇಟೆ ತಾಲೂಕು ಅಧ್ಯಕ್ಷೆÀ ರಜನಿ, ಜಿ.ಪಂ. ಉಪ ಕಾರ್ಯದರ್ಶಿ ಎಸ್. ಧನರಾಜು, ಯೋಜನಾ ನಿರ್ದೇಶಕ ಎಸ್. ಜಗದೀಶ್, ಮುಖ್ಯ ಯೋಜನಾಧಿಕಾರಿ ರಾಜಗೋಪಾಲ್, ಸಹಾಯಕ ಯೋಜನಾಧಿಕಾರಿ ಜೀವನ್ ಕುಮಾರ್, ತಾಲೂಕು ಪಂಚಾಯಿತಿ ಇಒ ಶೇಖರ್, ರಾಷ್ಟಿçÃಯ ಗ್ರಾಮೀಣ ಜೀವನೋಪಾಯ ಅಭಿಯಾನದ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಪಿ.ಕುಮಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಆನಂದ್, ಡಾ.ಗೋಪಿನಾಥ್, ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ. ವಿಶಾಲ್ ಕುಮಾರ್, ಜಿಲ್ಲಾ ಶಸ್ತçಚಿಕಿತ್ಸಕ ಡಾ. ನಂಜುAಡಯ್ಯ, ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕ ಜಿ.ಎಸ್. ಗುರುಸ್ವಾಮಿ ಇದ್ದರು.

ಮಹಿಳೆಯರು ಗೃಹ ಬಳಕೆಯ ವಸ್ತುಗಳು, ಅಲಂಕಾರಿಕಾ ಸಾಮಗ್ರಿಗಳು, ಆಹಾರ ಉತ್ಪನ್ನಗಳನ್ನು ಮಾರಾಟ ಮಾಡಿದರು.