ಸೋಮವಾರಪೇಟೆ, ಫೆ. ೭: ಜಿಲ್ಲೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡುವ ಸಂದರ್ಭ ನಡೆಯುವ ಕಾರ್ಯಕ್ರಮ ದಲ್ಲಿ ಮಡಿಕೇರಿ ಕ್ಷೇತ್ರಕ್ಕೆ ಸಂಬAಧಿಸಿ ದಂತೆ ೨೫೦೦ ಮಂದಿ ಫಲಾನು ಭವಿಗಳಿಗೆ ಹಕ್ಕುಪತ್ರ ವಿತರಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಹೇಳಿದರು.

ಸಮೀಪದ ನೇರುಗಳಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಣ್ಣೀರುಹಳ್ಳ ಗ್ರಾಮದ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಅರಣ್ಯ ಹಕ್ಕು ಸಮಿತಿ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಫಲಾನುಭವಿಗಳು ತಮ್ಮ ಜಾಗಕ್ಕೆ ಸಂಬAಧಿಸಿದAತೆ ಈವರೆಗೆ ಪಡೆದುಕೊಂಡಿರುವ ದಾಖಲೆಗಳು, ಆಧಾರ್ ಕಾರ್ಡ್, ಪಡಿತರ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ನಿಗದಿತ ಅವಧಿಯೊಳಗೆ ಸಂಬAಧಿಸಿದ ಅಧಿಕಾರಿಗಳಿಗೆ ಸಲ್ಲಿಸಬೇಕೆಂದು ಸೂಚಿಸಿದರು.

ಇದೇ ತಿಂಗಳ ಕೊನೆಯ ವಾರದಲ್ಲಿ ಮುಖ್ಯಮಂತ್ರಿಗಳು ಕೊಡಗಿಗೆ ಭೇಟಿ ನೀಡಲಿದ್ದಾರೆ. ಈ ಸಂದರ್ಭ ನಡೆಯುವ ಕಾರ್ಯಕ್ರಮ ದಲ್ಲಿ ಅಕ್ರಮ ಸಕ್ರಮ ಸಮಿತಿ, ೯೪ ಸಿ ಮತ್ತು ೯೪ ಸಿ.ಸಿ., ಅರಣ್ಯ ಹಕ್ಕು ಸಮಿತಿ ಯೋಜನೆಯಡಿ ಕ್ಷೇತ್ರ ವ್ಯಾಪ್ತಿಯಲ್ಲಿ ೨೫೦೦ಕ್ಕೂ ಅಧಿಕ ಮಂದಿಗೆ ಹಕ್ಕುಪತ್ರ ವಿತರಣೆ ಮಾಡಲಾಗುವುದು. ಅಧಿಕಾರಿಗಳೂ ಸಹ ಸಮರೋಪಾದಿ ಕೆಲಸ ನಿರ್ವಹಿಸುತ್ತಿದ್ದು, ಸಾರ್ವ ಜನಿಕರು ಅಗತ್ಯ ದಾಖಲೆಗಳನ್ನು ಒದಗಿಸಬೇಕೆಂದು ತಿಳಿಸಿದರು.

ಈ ಹಿಂದೆ ಸೋಮವಾರಪೇಟೆ ತಾಲೂಕು ತಹಶೀಲ್ದಾರ್ ಆಗಿದ್ದ ಈರಯ್ಯ ಅವರ ನಕಲಿ ಸಹಿ ಬಳಸಿ ಮುಖಂಡರೆನಿಸಿಕೊAಡ ಕೆಲವರು ಬಡವರಿಗೆ ನಕಲಿ ಹಕ್ಕುಪತ್ರಗಳನ್ನು ನೀಡಿದ್ದಾರೆ. ಆ ಹಕ್ಕುಪತ್ರಗಳು ಸಿಂಧು ವಾಗುವುದಿಲ್ಲ. ಅರಣ್ಯಕ್ಕೆ ಒತ್ತಿ ಕೊಂಡಿರುವ ಪ್ರದೇಶ, ಊರುಡುವೆ ಜಾಗದಲ್ಲಿ ತಲತಲಾಂತರದಿAದ ನೆಲೆಸಿರುವ ಮಂದಿಗೆ ಅರಣ್ಯ ಹಕ್ಕು ಸಮಿತಿ ಮೂಲಕ ಹಕ್ಕುಪತ್ರ ವಿತರಣೆಗೆ ಕ್ರಮವಹಿಸಲಾಗಿದ್ದು, ತಣ್ಣೀರುಹಳ್ಳದಲ್ಲಿ ಒಟ್ಟು ೨೧೦ ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಲಾಗುವುದು ಎಂದರು.ಕ್ಷೇತ್ರ ವ್ಯಾಪ್ತಿಯಲ್ಲಿ ಈವಗೆರೆ ಅಕ್ರಮ ಸಕ್ರಮ ಯೋಜನೆಯಡಿ ೨ ಸಾವಿರ ಮಂದಿಗೆ ಮತ್ತು ೯೪ ಸಿ-೯೪ಸಿಸಿ ಮೂಲಕ ೬ ಸಾವಿರ ಮಂದಿಗೆ ಹಕ್ಕುಪತ್ರ ವಿತರಿಸಲಾಗಿದೆ ಎಂದರು.

ರಾಜ್ಯದಲ್ಲಿಯೇ ಬೃಹತ್ ಪ್ರಮಾಣದ ಹಕ್ಕುಪತ್ರ ವಿತರಣಾ ಕಾರ್ಯಕ್ರಮವನ್ನು ಬೇಳೂರಿನ ಬಜೆಗುಂಡಿಯಲ್ಲಿ ನಡೆಸಲಾಗಿದೆ. ಸುಮಾರು ೩೯೦ ಮಂದಿಗೆ ಒಂದೇ ದಿನ ಅರಣ್ಯ ಹಕ್ಕು ಸಮಿತಿ ಮೂಲಕ ದಾಖಲೆ ಒದಗಿಸಲಾಗಿದೆ ಎಂದು ರಂಜನ್ ಹೇಳಿದರು.

ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಬಾಲಕೃಷ್ಣ ರೈ ಮಾತನಾಡಿ, ಫಲಾನುಭವಿಗಳು ಸಮಿತಿಗೆ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು. ನಂತರ ಅರಣ್ಯ ಇಲಾಖೆ ಮತ್ತು ಸರ್ವೆ ಇಲಾಖೆ ಯಿಂದ ಜಂಟಿ ಸರ್ವೆ ನಡೆಸ

ಲಾಗುವುದು. ವರದಿಯನ್ನು ಉಪ ವಿಭಾಗಾಧಿಕಾರಿಗಳಿಗೆ ಸಲ್ಲಿಸಿ, ಜಿಲ್ಲಾಧಿಕಾರಿಗಳಿಂದ ಅನುಮೋದನೆ ಪಡೆದ ನಂತರ ಸಮಾಜ ಕಲ್ಯಾಣ ಇಲಾಖೆಯ ಮೂಲಕ ಹಕ್ಕುಪತ್ರ ವಿತರಣೆ ಮಾಡಲಾಗುವುದು ಎಂದು ಮಾಹಿತಿಯಿತ್ತರು.

ಸಭೆಯ ಅಧ್ಯಕ್ಷತೆಯನ್ನು ಅರಣ್ಯ ಹಕ್ಕು ಸಮಿತಿ ಅಧ್ಯಕ್ಷೆ ಕಮಲ ಸುರೇಶ್ ವಹಿಸಿದ್ದರು. ವೇದಿಕೆಯಲ್ಲಿ ವಲಯ ಅರಣ್ಯಾಧಿಕಾರಿ ಚೇತನ್, ಡಿಆರ್‌ಎಫ್‌ಓ ನಾರಾಯಣ ಮೂಲ್ಯ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಚಂದ್ರಪ್ಪ, ಗ್ರಾ.ಪಂ. ಅಧ್ಯಕ್ಷೆ ಪುಷ್ಪ, ಉಪಾಧ್ಯಕ್ಷ ಟಿ.ಆರ್. ಪ್ರವೀಣ್, ಪ್ರಮುಖರಾದ ವಿ.ಎಂ. ವಿಜಯ, ಹೆಚ್.ಸಿ. ರಾಮಕೃಷ್ಣ, ಗ್ರಾಮ ಲೆಕ್ಕಿಗರಾದ ಶ್ವೇತಾ, ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಆಯಿಷಾ, ಗ್ರಾ.ಪಂ. ಸದಸ್ಯರುಗಳು ಉಪಸ್ಥಿತರಿದ್ದರು.