ಕರಿಕೆ, ಫೆ. ೭: ಕಳೆದ ಶೈಕ್ಷಣಿಕ ವರ್ಷದಲ್ಲಿ ೧೦ನೇ ತರಗತಿ ಪರೀಕ್ಷೆಯಲ್ಲಿ ಮಡಿಕೇರಿ ತಾಲೂಕಿನಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಕರಿಕೆ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿನಿ ಶ್ರೀಷ್ಮ ಟಿ.ಎಸ್. ಇವರು ಮಡಿಕೇರಿ ಯಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ನಾಗೇಶ್ ಅವರಿಂದ ಉಚಿತ ಗಣಕಯಂತ್ರ ಪಡೆದುಕೊಂಡರು.