ಮಡಿಕೇರಿ, ಫೆ. ೮ : ರಾಷ್ಟಿçÃಯ ಲೋಕ ಅದಾಲತ್ ತಾ. ೧೧ ರಂದು ಹಮ್ಮಿಕೊಂಡಿರುವುನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಕಾರ್ಯನಿರ್ವಾಹಕ ಅಧ್ಯಕ್ಷ ವೀರಪ್ಪ ಅವರ ಮನವಿಯಂತೆ ವಾಹನದ ಮಾಲೀಕರು ಬಾಕಿ ಉಳಿಸಿಕೊಂಡಿರುವ ಸಂಚಾರ ನಿಯಮದ ಉಲ್ಲಂಘನೆ ಪ್ರಕರಣಗಳ ದಂಡ ಮೊತ್ತಗಳಿಗಾಗಿ ಕರ್ನಾಟಕ ಸರ್ಕಾರವು ಶೇ.೫೦ ರಿಯಾಯಿತಿ ನೀಡಿ ಆದೇಶಿಸಿದೆ.

ಸಾರ್ವಜನಿಕರು ಸಂಚಾರ ನಿಯಮ ಪ್ರಕರಣಗಳ ಉಲ್ಲಂಘನೆಗಾಗಿ ದಂಡ ಪಾವತಿಸದೇ ಬಾಕಿ ಉಳಿಸಿಕೊಂಡಿರುವ ಪ್ರಕರಣಗಳಲ್ಲಿ ತಾ. ೧೧ ರೊಳಗೆ ಇತ್ಯರ್ಥಪಡಿಸಿಕೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯಿಸುವಂತೆ ಶೇ.೫೦ ರಿಯಾಯಿತಿ ನೀಡಿರುತ್ತದೆ.

ಪಾವತಿಸುವ ವಿಧಾನ: ‘ಕರ್ನಾಟಕ ಒನ್’ ವೆಬ್‌ಸೈಟ್‌ನಲ್ಲಿ ವಿವರಗಳನ್ನು ಪಡೆದು ಪಾವತಿಸಬಹುದಾಗಿದೆ. ಪೇ ಟಿಯಂ ಆಫ್ ಮೂಲಕವೂ ಉಲ್ಲಂಘನೆ ವಿವರಗಳನ್ನು ಪಡೆದು ದಂಡ ಪಾವತಿಸಬಹುದಾಗಿದೆ. ಹತ್ತಿರದ ಸಂಚಾರಿ ಪೊಲೀಸ್ ಠಾಣೆಗಳಲ್ಲಿ ನಿಮ್ಮ ವಾಹನದ ನೋಂದಣಿ ಸಂಖ್ಯೆ ವಿವರ ಒದಗಿಸಿ, ವಿವರಗಳನ್ನು ಪಡೆದು, ದಂಡವನ್ನು ಪಾವತಿಸಬಹುದಾಗಿದೆ.

ಈ ಆದೇಶವು ತಾ. ೧೧ ರವರೆಗೆ ಜಾರಿಯಲ್ಲಿರುತ್ತದೆ. ಯಾವುದಾದರೂ ಸಂಚಾರಿ ನಿಯಮ ಉಲ್ಲಂಘನೆ ದಂಡವು ಬಾಕಿ ಇದ್ದಲ್ಲಿ ಕೂಡಲೇ ಪಾವತಿಸಿ, ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ. ಸಾರ್ವಜನಿಕರು ಈ ಅವಕಾಶದ ಸದುಪಯೋಗವನ್ನು ಪಡೆದುಕೊಳ್ಳುವಂತೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್ ಅವರು ಕೋರಿದ್ದಾರೆ.