ಕಣಿವೆ, ಫೆ. ೮: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವನತ್ತೂರು ಗ್ರಾಮದಲ್ಲಿ ವಾಸವಿದ್ದ ನಿವೃತ್ತ ಅರಣ್ಯಾಧಿಕಾರಿ ಶಶಿಧರ್ (೬೯) ರಿವಾಲ್ವರ್‌ನಿಂದ ಹಣೆಗೆ ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ತಾ. ೮ ರ ಮುಂಜಾನೆ ೬ ಗಂಟೆಯ ಸಮಯದಲ್ಲಿ ತಮ್ಮ ವಾಸದ ಮನೆಯ ಮಲಗುವ ಕೋಣೆಯಲ್ಲಿ ಹಾಸಿಗೆ ಮೇಲೆ ಪತ್ರವೊಂದನ್ನು ಪೊಲೀಸರಿಗೆ ಬರೆದಿಟ್ಟಿರುವ ಮೃತ ಶಶಿಧರ್, ನಾನು ನಿದ್ರಾಹೀನತೆಯಿಂದಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ನನ್ನ ಮಕ್ಕಳಿಗೆ ತೊಂದರೆ ಕೊಡಬೇಡಿ ಎಂದು ಉಲ್ಲೇಖಿಸಿದ್ದಾರೆ.
ಮೃತರು ಪತ್ನಿ ಸೇರಿದಂತೆ ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.