ಮಡಿಕೇರಿ, ಫೆ. ೮: ಜವಳಿ ಅಭಿವೃದ್ಧಿ ಆಯುಕ್ತರು ಹಾಗೂ ನಿರ್ದೇಶಕರು ಕೈಮಗ್ಗ ಮತ್ತು ಜವಳಿ ಇಲಾಖೆ ಹಾಗೂ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೈಮಗ್ಗ ಮತ್ತು ಜವಳಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ತಾ. ೯ ರಿಂದ ೧೫ ರವರೆಗೆ ‘ಕಾವೇರಿ ವಸ್ತçಸಿರಿ’ ಜಿಲ್ಲಾ ಮಟ್ಟದ ಕೈಮಗ್ಗ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ನಡೆಯಲಿದೆ. ಉದ್ಘಾಟನಾ ಸಮಾರಂಭವು ತಾ. ೯ ರಂದು ಮಧ್ಯಾಹ್ನ ೩ ಗಂಟೆಗೆ ನಗರದ ಗಾಂಧಿ ಮೈದಾನದಲ್ಲಿ ನಡೆಯಲಿದೆ.