ಮಂಡ್ಯ. ಫೆ. ೮: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ವತಿಯಿಂದ ಕೊಡಗಿನ ಇಬ್ಬರಿಗೆ ‘ವಿಪ್ರಶ್ರೀ’ ಬಿರುದು ನೀಡಿ ಸನ್ಮಾನಿಸಲಾಯಿತು. ಗಾಯತ್ರಿ ಸಮುದಾಯ ಭವನದಲ್ಲಿ ನಡೆದ ಸಮಾರಂಭದಲ್ಲಿ ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗು ಹಾಗೂ ಹಾಸನ ಜಿಲ್ಲೆಗಳ ಸಾಧಕರಿಗೆ ವಿಶ್ವಾಮಿತ್ರ ಪ್ರತಿಭಾ ಪುರಸ್ಕಾರ ಹಾಗೂ ವಿಪ್ರ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಕೊಡಗಿನಿಂದ ‘ಶಕ್ತಿ’ಯ ಪ್ರಧಾನ ಸಂಪಾದಕ ಜಿ. ರಾಜೇಂದ್ರ ಅವರಿಗೆ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಮಾಡಿರುವ ಅಪೂರ್ವ ಸಾಧನೆಯನ್ನು ಪುರಸ್ಕರಿಸಿ ‘ವಿಪ್ರಶ್ರೀ’ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಅದೇ ರೀತಿ ಕುಶಾಲನಗರದ ಬಿ.ಆರ್. ನಾರಾಯಣ ಅವರಿಗೆ ಶಿಕ್ಷಣ ಹಾಗೂ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಮಾಡಿರುವ ಅಪೂರ್ವ ಸಾಧನೆಯನ್ನು ಪುರಸ್ಕರಿಸಿ ‘ವಿಪ್ರಶ್ರೀ’ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಈ ಸಂದರ್ಭ ನಡೆದ ಸಮಾರಂಭದ ಅಧ್ಯಕ್ಷತೆಯನ್ನು ಮಂಡ್ಯ ಜಿಲ್ಲಾ ಬ್ರಾಹ್ಮಣ

ಸಭಾದ ಅಧÀ್ಯಕ್ಷರಾದ ಬೆಳ್ಳೂರು

ಎಸ್. ಶಿವರಾಂ ಅವರು ವಹಿಸಿದ್ದರು. ಉದ್ಘಾಟನೆಯನ್ನು ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ನಿರ್ದೇಶಕರಾದ ಸುಬ್ರಾಯ ಎಂ. ಹೆಗಡೆ ನೆರವೇರಿಸಿದರು. ವೇದಿಕೆಯಲ್ಲಿ ಮಂಡಳಿಯ ರಾಜ್ಯನಿರ್ದೇಶಕರು ಗಳಾದ ವೇದಬ್ರಹ್ಮ ವಿ. ಭಾನು ಪ್ರಕಾಶ್ ಶರ್ಮ, ಕೆ.ಎನ್. ಛಾಯಾಪತಿ, ಎಂ.ಆರ್. ಗೋಪಾಲಕೃಷ್ಣ, ವತ್ಸಲ ನಾಗೇಶ್ ಉಪಸ್ಥಿತರಿದ್ದರು.