ಮಡಿಕೇರಿ, ಫೆ. ೮: ಟರ್ಕಿ ಹಾಗೂ ಸಿರಿಯಾ ದೇಶಗಳಲ್ಲಿ ಪ್ರಬಲ ಭೂಕಂಪನ ಸಂಭವಿಸಿದ್ದು, ಕೊಡಗು ಜಿಲ್ಲೆಯ ನಿವಾಸಿಗಳು ಯಾರಾದರೂ ಟರ್ಕಿ ಅಥವಾ ಸಿರಿಯಾ ದೇಶಗಳಲ್ಲಿ ವಾಸವಿದ್ದು ನೆರವಿನ ಅಗತ್ಯವಿದ್ದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರ ೦೮೨೭೨-೨೨೧೦೭೭, ೦೮೨೭೨-೨೨೧೦೯೯ ಈ ಸಂಖ್ಯೆಗೆ ಕರೆ ಮಾಡಿ ಅಥವಾ ೮೫೫೦೦೦೧೦೭೭ ಸಂಖ್ಯೆಗೆ ವಾಟ್ಸಪ್ ಮಾಡಿ ಮಾಹಿತಿ ನೀಡಬೇಕೆಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮನವಿ ಮಾಡಿದೆ.