ಮಡಿಕೇರಿ, ಫೆ. ೯: ಕರಿಕೆ-ಭಾಗಮಂಡಲ ರಸ್ತೆಯನ್ನು ತಕ್ಷಣ ಅಭಿವೃದ್ಧಿ ಪಡಿಸಬೇಕು ಮತ್ತು ಮಳೆಗಾಲದಲ್ಲಿ ಬಿದ್ದಿರುವ ಮಣ್ಣಿನ ರಾಶಿಯನ್ನು ತೆರವುಗೊಳಿಸಿ ವಾಹನಗಳ ಸಂಚಾರಕ್ಕೆ ಅನುಕೂಲ ಕಲ್ಪಿಸಿಕೊಡಬೇಕೆಂದು ಒತ್ತಾಯಿಸಿ ಕಾಂಗ್ರೆಸ್ ಪಕ್ಷದ ಪ್ರಮುಖರು ಜಿಲ್ಲಾಧಿಕಾರಿ ಹಾಗೂ ಲೋಕೋಪ ಯೋಗಿ ಇಲಾಖೆ ಅಭಿಯಂತರರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಮುಂದಿನ ೧೫ ದಿನಗಳೊಳಗೆ ರಸ್ತೆ ಅಭಿವೃದ್ಧಿಗೆ ಚಾಲನೆ ನೀಡದಿದ್ದಲ್ಲಿ ಕರಿಕೆ ಗ್ರಾಮಸ್ಥರ ಸಹಕಾರದೊಂದಿಗೆ ಕಾಂಗ್ರೆಸ್ ಪಕ್ಷ ಪ್ರತಿಭಟನೆ ನಡೆಸಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಮನವಿ ಸಲ್ಲಿಸಿ ಮಾತನಾಡಿದ ಕರಿಕೆ ಗ್ರಾ.ಪಂ ಉಪಾಧ್ಯಕ್ಷ ಎನ್. ಬಾಲಚಂದ್ರ ನಾಯರ್ ಕರಿಕೆ ಗ್ರಾಮದ ಮುಖ್ಯ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದೆ. ಕೊಡಗಿನ ಗಡಿಭಾಗದ ರಸ್ತೆಯ ಅಭಿವೃದ್ಧಿಯನ್ನೇ ಸರ್ಕಾರ ಮರೆತಿದೆ.

ಕರಿಕೆ ಗ್ರಾಮವು ಜಿಲ್ಲಾ ಕೇಂದ್ರವಾದ ಮಡಿಕೇರಿಯಿಂದ ಕೇವಲ ೬೮ ಕಿ.ಮೀ. ದೂರದಲ್ಲಿದೆ. ನೆರೆಯ ಕೇರಳ ರಾಜ್ಯದ ಕಾಸರ ಗೋಡು ಜಿಲ್ಲೆಗೆ ಹೊಂದಿಕೊAಡಿದೆ. ಪುಣ್ಯಕ್ಷೇತ್ರಗಳಾದ ತಲಕಾವೇರಿ ಮತ್ತು ಎಮ್ಮೆಮಾಡುವಿಗೆ ತೆರಳಲು ಇದೇ ರಸ್ತೆಯನ್ನು ಅವಲಂಬಿಸಬೇಕಾಗಿದೆ. ಅಂತರ ರಾಜ್ಯ ವ್ಯಾಪಾರ, ವಹಿವಾಟು, ಸರಕು ಸಾಗಾಣಿಕೆಗೂ ಇದು ಸಹಕಾರಿಯಾಗಿದೆ. ಆದರೆ ಸಾವಿರಾರು ವಾಹನಗಳು ಸಂಚರಿಸುವ ಈ ರಸ್ತೆಯನ್ನು ಅಭಿವೃದ್ಧಿ ಪಡಿಸದೆ ಕಡೆಗಣಿಸಲಾಗಿದೆ. ವಾಹನ ಚಾಲಕರು ಮಾತ್ರವಲ್ಲದೆ ಪಾದಚಾರಿಗಳು ಕೂಡ ಪರದಾಡುವ ಪರಿಸ್ಥಿತಿ ನಿರ್ಮಾಣ ವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕೆಪಿಸಿಸಿ ಸದಸ್ಯ ಬಿ.ಎಸ್. ರಮಾನಾಥ್ ಮಾತನಾಡಿ, ಪಂಚಾಯಿತಿ ವ್ಯಾಪ್ತಿಯ ಸುಮಾರು ೧೦ ಕಿ.ಮೀ. ನಷ್ಟು ರಸ್ತೆ ಸಂಪೂರ್ಣ ವಾಗಿ ಹದಗೆಟ್ಟಿದೆ. ಇದರಿಂದ ಗ್ರಾಮಸ್ಥರ ನಿತ್ಯ ಸಂಚಾರಕ್ಕೆ ತೊಂದರೆಯಾಗಿದೆ. ಶಾಲಾ ಮಕ್ಕಳು ಹಾಗೂ ನಿತ್ಯ ಕೆಲಸಕ್ಕೆ ಹೋಗುವ ಕೂಲಿ ಕಾರ್ಮಿಕರು ಗುಂಡಿ ಬಿದ್ದ ರಸ್ತೆಯ ಮೂಲಕವೇ ಕಷ್ಟಪಟ್ಟು ತೆರಳ ಬೇಕಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಕಳೆದ ಮಳೆಗಾಲದಲ್ಲಿ ರಸ್ತೆಯ ಬದಿಯಲ್ಲಿ ಬಿದ್ದಿದ್ದ ಮಣ್ಣಿನ ರಾಶಿಯನ್ನು ಇಲ್ಲಿಯವರೆಗೆ ತೆರವು ಗೊಳಿಸಿಲ್ಲ. ಇದರಿಂದ ವಾಹನಗಳ ಸಂಚಾರಕ್ಕೆ ಅಡಚಣೆಯಾಗಿದೆ. ರಸ್ತೆಯ ಅಭಿವೃದ್ಧಿಯನ್ನು ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ನಿರ್ಲಕ್ಷಿಸಿ ರುವುದರಿಂದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳನ್ನು ಎಚ್ಚರಿಸಲು ಪ್ರತಿಭಟನೆ ನಡೆಸುವುದು ಅನಿವಾರ್ಯ ವಾಗಿದೆ ಎಂದರು.

ಕರಿಕೆ ವಲಯ ಕಾಂಗ್ರೆಸ್ ಅಧ್ಯಕ್ಷ ಬಿ.ಡಿ. ದೇವರಾಜ್ ಮಾತನಾಡಿ, ನೆರೆಯ ಕೇರಳ ರಾಜ್ಯದಲ್ಲಿ ಉತ್ತಮ ರಸ್ತೆಗಳನ್ನು ಅಲ್ಲಿನ ಸರ್ಕಾರ ನಿರ್ಮಿಸಿದೆ. ಆದರೆ ಕರ್ನಾಟಕ ರಾಜ್ಯ ಸರ್ಕಾರ ಮಾತ್ರ ರಸ್ತೆ ಅಭಿವೃದ್ಧಿ ಮಾಡದೆ ಕೊಡಗು ಜಿಲ್ಲೆ ಹಾಗೂ ರಾಜ್ಯಕ್ಕೂ ಕಳಂಕ ತಂದಿದೆ. ೨೦೦೪ ರಿಂದ ಕರಿಕೆ-ಭಾಗಮಂಡಲ ರಸ್ತೆಯ ವಿಸ್ತರಣೆ ಕಾರ್ಯವೇ ನಡೆದಿಲ್ಲ. ರಸ್ತೆ ಮಾತ್ರವಲ್ಲದೆ ಸರ್ಕಾರದ ಮೂಲ ಭೂತ ಸೌಲಭ್ಯದ ಕೊರತೆಯಿಂದಲೂ ಕರಿಕೆ ಜನರು ಪರದಾಡುತ್ತಿದ್ದಾರೆ. ಸಾಕಷ್ಟು ಬಾರಿ ಜಿಲ್ಲೆಯ ಶಾಸಕರಿಗೆ, ಸಂಸದರಿಗೆ ಸಮಸ್ಯೆಗಳ ಬಗ್ಗೆ ತಿಳಿಸಲಾಗಿದೆ. ಆದರೆ ಯಾವುದೇ ಸ್ಪಂದನ ದೊರೆತ್ತಿಲ್ಲ ಎಂದು ಟೀಕಿಸಿದರು.

ರಾಷ್ಟಿçÃಯ ಹೆದ್ದಾರಿ ಕನಸು

೨೦೧೭ ರಲ್ಲಿ ಕೇರಳದ ಕಾಂಞ್ಞAಗಾಡುವಿನಿAದ ಮಡಿಕೇರಿಯ ಕಾಟಕೇರಿ ತನಕ ೧೧೦ ಕಿ.ಮೀ. ರಸ್ತೆಯನ್ನು ಅಭಿವೃದ್ಧಿಪಡಿಸಲು ರಾಷ್ಟಿçÃಯ ರಸ್ತೆ ಅಭಿವೃದ್ಧಿ ನಿಗಮ ದಿಂದ ಸರ್ವೆಗೆ ಆದೇಶ ನೀಡಲಾಗಿತ್ತು. ಈ ಬಗ್ಗೆ ಕೇರಳ ರಾಜ್ಯದ ಗಡಿ ಭಾಗದವರೆಗೆ ಸರ್ವೆಯಾಗಿದೆ. ಆದರೆ ಕರ್ನಾಟಕದಲ್ಲಿ ಸರ್ವೆ ಕಾರ್ಯ ನಡೆದಿಲ್ಲ. ರಾಷ್ಟಿçÃಯ ಹೆದ್ದಾರಿ ಎನ್ನುವುದು ಕನಸಾಗಿಯೇ ಉಳಿದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.