ಚೆಯ್ಯಂಡಾಣೆ, ಫೆ. ೯: ಇಲ್ಲಿನ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ತೋಟಗಾರಿಕೆ ಇಲಾಖೆ, ಕೊಡಗು ಜಿಲ್ಲಾ ಪಂಚಾಯತ್ ವತಿಯಿಂದ ನರಿಯಂದಡ ಗ್ರಾಮ ಪಂಚಾಯಿತಿ ಮಟ್ಟದ ಸಂಜೀವಿನಿ ಒಕ್ಕೂಟದ ಸದಸ್ಯೆಯರಿಗೆ ಹಾಗೂ ಗ್ರಾಮಸ್ಥರಿಗೆ ಎರಡು ದಿನಗಳ ಜೇನು ಕೃಷಿ ಕಾರ್ಯಾಗಾರ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿದ್ದಂಡ ರಾಜೇಶ್ ಅಚ್ಚಯ್ಯ ಚಾಲನೆ ನೀಡಿದರು.

ಜೇನು ಕೃಷಿ ತರಬೇತಿ ಕಾರ್ಯಾಗಾರದಲ್ಲಿ ಒಟ್ಟು ೩೦ ಜನರಿಗೆ ಅವಕಾಶ ಕಲ್ಪಿಸಲಾಗಿತ್ತು. ಇದರಲ್ಲಿ ಸಂಜೀವಿನಿ ಒಕ್ಕೂಟದ ಸದಸ್ಯೆಯರು ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು. ಚೆಯ್ಯಂಡಾಣೆ, ಫೆ. ೯: ಇಲ್ಲಿನ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ತೋಟಗಾರಿಕೆ ಇಲಾಖೆ, ಕೊಡಗು ಜಿಲ್ಲಾ ಪಂಚಾಯತ್ ವತಿಯಿಂದ ನರಿಯಂದಡ ಗ್ರಾಮ ಪಂಚಾಯಿತಿ ಮಟ್ಟದ ಸಂಜೀವಿನಿ ಒಕ್ಕೂಟದ ಸದಸ್ಯೆಯರಿಗೆ ಹಾಗೂ ಗ್ರಾಮಸ್ಥರಿಗೆ ಎರಡು ದಿನಗಳ ಜೇನು ಕೃಷಿ ಕಾರ್ಯಾಗಾರ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿದ್ದಂಡ ರಾಜೇಶ್ ಅಚ್ಚಯ್ಯ ಚಾಲನೆ ನೀಡಿದರು.

ಜೇನು ಕೃಷಿ ತರಬೇತಿ ಕಾರ್ಯಾಗಾರದಲ್ಲಿ ಒಟ್ಟು ೩೦ ಜನರಿಗೆ ಅವಕಾಶ ಕಲ್ಪಿಸಲಾಗಿತ್ತು. ಇದರಲ್ಲಿ ಸಂಜೀವಿನಿ ಒಕ್ಕೂಟದ ಸದಸ್ಯೆಯರು ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು. ಕೃಷಿಯಲ್ಲಿ ನಾವು ತೊಡಗಬೇಕು, ಹಲವಾರು ರೋಗಗಳಿಗೆ ಜೇನು ಕೂಡ ಮದ್ದು. ಜೇನು ಕೃಷಿಯಿಂದ ಉಳಿದ ಹಲವಾರು ಕೃಷಿ ಚಟುವಟಿಕೆಗಳಿಗೆ ಪ್ರಯೋಜನವಾಗಲಿದೆ ಎಂದರು.

ಗ್ರಾ.ಪA. ಅಭಿವೃದ್ಧಿ ಅಧಿಕಾರಿ ಆಶಾ ಕುಮಾರಿ ಜೇನು ಕೃಷಿಯಲ್ಲಿ ತೊಡಗಿಸಿಕೊಂಡು ಹೆಚ್ಚು ಲಾಭಗಳಿಸಿ ಎಲ್ಲರೂ ಇಂತಹ ಕಾರ್ಯಕ್ರಮವನ್ನು ಪ್ರೊತ್ಸಾಹಿಸಿ ಎಂದು ಕರೆ ನೀಡಿದರು.

ಗ್ರಾ.ಪಂ. ಉಪಾಧ್ಯಕ್ಷೆ ಬಿ.ಎಸ್. ಪುಷ್ಪ, ಸ.ಮಾ.ಪ್ರಾಥಮಿಕ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ರತ್ನ, ತೋಟಗಾರಿಕೆ ಇಲಾಖೆಯ ಅಧಿಕಾರಿ ಶಿವಕುಮಾರ್, ಗ್ರಾ.ಪಂ. ಸದಸ್ಯೆ ಮಂಜುಳಾ, ಸಂಜೀವಿನಿ ಒಕ್ಕೂಟದ ಸದಸ್ಯೆಯರು ಹಾಗೂ ಗ್ರಾಮಸ್ಥರು ಇದ್ದರು.