ಕೂಡಿಗೆ, ಫೆ. ೯: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಮನ್ವಯ ಶಿಕ್ಷಣ ವಿಭಾಗದಿಂದ ಮುಳ್ಳುಸೋಗೆ ಸ.ಹಿ. ಪ್ರಾಥಮಿಕ ಶಾಲೆಯಲ್ಲಿ ವಿಶೇಷಚೇತನ ವಿದ್ಯಾರ್ಥಿಗಳಿಗೆ ಜಿಲ್ಲಾಮಟ್ಟದ ಕ್ರೀಡಾಕೂಟ ನಡೆಯಿತು.
ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ.ರಂಗಧಾಮಯ್ಯ ಕ್ರೀಡಾಕೂಟ ಉದ್ಘಾಟಿಸಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಆರ್.ಎಸ್. ಹರೀಶ್ ಅಧ್ಯಕ್ಷತೆಯಲ್ಲಿ ನಡೆದ ಕ್ರೀಡಾಕೂಟದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ. ಸುರೇಶ್, ಜಿಲ್ಲಾ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಎಚ್.ಕೆ. ಕುಮಾರ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಡಾ. ಸದಾಶಿವಯ್ಯ ಎಸ್. ಪಲ್ಲೇದ್, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಧರ್ಮಪ್ಪ, ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಎಂ.ಎಲ್. ಸುಕುಮಾರಿ, ಸಂಪನ್ಮೂಲ ವ್ಯಕ್ತಿಗಳಾದ ಎಚ್.ಆರ್. ರತ್ನಮ್ಮ, ಎಂ.ಕೆ. ದಯಾನಂದ, ರಂಜಿತ, ಮುಖ್ಯ ಶಿಕ್ಷಕಿ ಭಾಗ್ಯ, ಕಾವಲುಪಡೆ ಜಿಲ್ಲಾಧ್ಯಕ್ಷ ಎಂ.ಕೃಷ್ಣ ಮತ್ತಿತರರು ಇದ್ದರು.
ಮಕ್ಕಳಿಗೆ ಭಾರದ ಗುಂಡು ಎಸೆತ, ಜಾವೆಲಿನ್ ಎಸೆತ ಮತ್ತಿತರ ಕ್ರೀಡೆಗಳನ್ನು ಏರ್ಪಡಿಸಲಾಗಿತ್ತು.