ಕಣಿವೆ, ಫೆ. ೯: ಕುಶಾಲನಗರದಲ್ಲಿ ಜರುಗಿದ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕುಶಾಲನಗರ ತಾಲೂಕು ರಚನಾ ಹೋರಾಟ ಸಮಿತಿ ಅಧ್ಯಕ್ಷ ಸಾಹಿತ್ಯ ಸಮ್ಮೇಳನದ ಆರ್ಥಿಕ ಸಮಿತಿ ಅಧ್ಯಕ್ಷರೂ ಆದ ವಿ.ಪಿ. ಶಶಿಧರ್ ಹಾಗೂ ತಾಲೂಕು ಹೋರಾಟವನ್ನು ಸಾಕಾರಗೊಳಿಸಿದ ಶಾಸಕ ಅಪ್ಪಚ್ಚು ರಂಜನ್ ಅವರನ್ನು ವಿಧಾನಪರಿಷತ್ತು ಸಭಾಪತಿ ಬಸವರಾಜ ಹೊರಟ್ಟಿ ಅವರ ಮೂಲಕ ಸನ್ಮಾನಿಸಲಾಯಿತು.

ಈ ಸಂದರ್ಭ ಸಮ್ಮೇಳನಾಧ್ಯಕ್ಷ ಬಿ.ಆರ್. ನಾರಾಯಣ, ಕಸಾಪ ಜಿಲ್ಲಾಧ್ಯಕ್ಷ ಎಂ.ಪಿ. ಕೇಶವಕಾಮತ್ ಹಾಗೂ ಕುಶಾಲನಗರ ತಾಲೂಕು ಅಧ್ಯಕ್ಷ ಕೆ.ಎಸ್. ಮೂರ್ತಿ ಮತ್ತಿತರರು ಇದ್ದರು.