ಕೂಡಿಗೆ, ಫೆ. ೯: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುದುಗೂರು ಗ್ರಾಮದಲ್ಲಿರುವ ಶ್ರೀ ಉಮಾಮಹೇಶ್ವರ ದೇವಾಲಯ ಆವರಣದಲ್ಲಿ ಶಿವರಾತ್ರಿ ಹಬ್ಬದ ಅಂಗವಾಗಿ ವಿವಿಧ ಹೋಮ ಹವನಗಳು ತಾ. ೧೮ ರಂದು ನಡೆಯಲಿವೆ.

ಶಿವರಾತ್ರಿ ಹಬ್ಬದ ಆಚರಣೆಯ ಅಂಗವಾಗಿ ಶ್ರೀ ಗಣಪತಿ ಹೋಮ, ಮಹಾ ಮೃತ್ಯುಂಜಯ ಹೋಮ, ರುದ್ರಹೋಮ, ರುದ್ರಾಭಿಷೇಕ, ಸಂಜೆ ೪.೩೦ ಗಂಟೆಗೆ ಶ್ರೀ ಉಮಾಮಹೇಶ್ವರ ಸ್ವಾಮಿ ಉತ್ಸವ ಮೂರ್ತಿಯ ಮೆರವಣಿಗೆಯು ವಾದ್ಯಗೋಷ್ಠಿಯೊಂದಿಗೆ ಕ್ಷೇತ್ರದ ಪ್ರದಕ್ಷಿಣೆಯ ನಂತರ ವಿದ್ಯುತ್ ಅಲಂಕೃತ ಭವ್ಯ ಮಂಟಪದಲ್ಲಿ ಸ್ವಾಮಿಯ ವಿಗ್ರಹವನ್ನು ಪ್ರತಿಷ್ಠಾಪಿಸಿ ಹುದುಗೂರು ಗ್ರಾಮ ವ್ಯಾಪ್ತಿಯಲ್ಲಿ ಮೆರವಣಿಗೆ ಸಾಗಿ ಸ್ವಸ್ಥಾನವನ್ನು ಸೇರಲಿದೆ ಎಂದು ದೇವಾಲಯ ಸಮಿತಿಯ ಅಧ್ಯಕ್ಷ ಟಿ.ಎಂ. ಚಾಮಿ ತಿಳಿಸಿದ್ದಾರೆ.