ಮಡಿಕೇರಿ, ಫೆ. ೯: ಜವಳಿ ಅಭಿವೃದ್ಧಿ ಆಯುಕ್ತರು ಹಾಗೂ ನಿರ್ದೇಶಕರು ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕೈಮಗ್ಗ ಮತ್ತು ಜವಳಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ತಾ. ೧೫ ರವರೆಗೆ ಗಾಂಧಿ ಮೈದಾನದಲ್ಲಿ ಆಯೋಜಿಸಿರುವ ‘ಕಾವೇರಿ ವಸ್ತçಸಿರಿ’ ಜಿಲ್ಲಾ ಮಟ್ಟದ ಕೈಮಗ್ಗ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಗಣ್ಯರು ಚಾಲನೆ ನೀಡಿದರು.

ಮಳಿಗೆಗಳನ್ನು ಉದ್ಘಾಟಿಸಿ ಮಾತನಾಡಿದ ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಭಾರತ ದೇಶ ಗುಡಿಕೈಗಾರಿಕೆಗೆ ಪ್ರಸಿದ್ಧಿ ಹೊಂದಿದೆ. ಇದನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಉತ್ತೇಜನ ನೀಡುತ್ತಿದೆ. ಉತ್ಪಾದಿಸಿದ ವಸ್ತುಗಳ ಮಾರಾಟಕ್ಕೂ ಮಾರುಕಟ್ಟೆ ತೆರೆದುಕೊಂಡಿದೆ. ರಾಜ್ಯದಲ್ಲಿಯೂ ಗುಣಮಟ್ಟದ ಕೈಮಗ್ಗ ಉತ್ಪನ್ನಗಳು ದೊರೆಯುತ್ತಿವೆ. ಇದರ ಬಳಕೆ ಹೆಚ್ಚಾಗಬೇಕು ಎಂದು ಕರೆ ನೀಡಿದರು.

ಸಭಾಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ನಗರಸಭಾ ಅಧ್ಯಕ್ಷೆ ನೆರವಂಡ ಅನಿತಾ ಪೂವಯ್ಯ, ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಮೇಳ ಆಯೋಜಿಸಿರುವುದು ಶ್ಲಾಘನೀಯ. ತಲಾತಲಾಂತರಗಳಿAದ ನೇಕಾರರು ಚರಕ ಉಪಯೋಗಿಸಿ ಬಟ್ಟೆ ತಯಾರಿಸುತ್ತಿದ್ದಾರೆ. ಇಂದಿನ ಕಾಲಘಟ್ಟದಲ್ಲಿ ಯಂತ್ರಗಳ ಬಳಕೆಯಾಗುತ್ತಿದೆ. ಇವೆಲ್ಲದರ ನಡುವೆ ಸ್ವದೇಶ ವಸ್ತುಗಳ ಬಳಕೆಯನ್ನು ಉತ್ತೇಜಿಸುವ ಸಲುವಾಗಿ ವಿಮೆ, ಸಹಾಯಧನ, ಸಾಲ ಸೌಲಭ್ಯ ಸೇರಿದಂತೆ ಅನೇಕ ಯೋಜನೆಯನ್ನು ಸರಕಾರ ಅನುಷ್ಠಾನಗೊಳಿಸಿದೆ. ಇದನ್ನು ಬಳಸಿಕೊಳ್ಳುವಂತೆ ಸಲಹೆ ನೀಡಿದರು.

ಪಶ್ಚಿಮ ಬಂಗಾಳ, ಕುಶಾಲನಗರ, ತುಮಕೂರು, ಬೀದರ್, ಹಾಸನ, ಚಿಕ್ಕಬಳ್ಳಾಪುರ, ಶಿರಸಿ, ಪೊನ್ನಂಪೇಟೆ, ಬೆಂಗಳೂರು, ಬೆಳಗಾವಿ, ಗಜೇಂದ್ರಘಡ, ಗದಗ, ದಾವಣಗೆರೆ ಸೇರಿದಂತೆ ವಿವಿಧೆಡೆಯಿಂದ ೨೦ಕ್ಕೂ ಹೆಚ್ಚು ವರ್ತಕರು ಮೇಳದಲ್ಲಿ ಭಾಗವಹಿಸಿದ್ದಾರೆ. ನಗರಸಭಾ ಸದಸ್ಯೆ ಉಷಾ ಕಾವೇರಪ್ಪ, ಕೈಮಗ ಮತ್ತು ಜವಳಿ ಇಲಾಖೆ ಸಹಾಯಕ ನಿರ್ದೇಶಕ ಗುರುಸ್ವಾಮಿ ಹಾಜರಿದ್ದರು.