ಮಡಿಕೇರಿ, ಫೆ. ೯: ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜಾದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು, ಮಡಿಕೇರಿ ಇಲ್ಲಿ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಹಾಗೂ ಸ್ನಾತಕೋತ್ತರ ವಾಣಿಜ್ಯ ವಿಭಾಗದ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿರುವ ಪ್ರದೀಪ್ ಆರ್. ಭಂಡಾರಿ ಇವರು ಮಂಡಿಸಿದ ‘‘ಪಾಲಿಸಿಸ್ ಆಂಡ್ ಪ್ರಾಕ್ಟಿಸಸ್ ಆಫ್ ಎಂಪ್ಲೋಯಿ ಮ್ಯಾನೇಜ್ಮೆಂಟ್ ಇನ್ ಟೆಲಿಕಾಂ ಸೆಕ್ಟರ್’’ ಎಂಬ ಸಂಶೋಧನಾ ಮಹಾ ಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯವು ಪಿ.ಎಚ್.ಡಿ. ಪದವಿ ನೀಡಿ ಗೌರವಿಸಿದೆ. ಇವರು ಉಡುಪಿ ಜಿಲ್ಲೆ ಕಾಪು ತಾಲೂಕಿನ ದಿ. ರವೀಂದ್ರ ಭಂಡಾರಿ ಹಾಗೂ ದಿ. ಸುಜಯ ಭಂಡಾರಿಯವರ ಪುತ್ರರಾಗಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಸ್. ಯಡಪಡಿತ್ತಾಯ ಅವರ ಮಾರ್ಗದರ್ಶನದಲ್ಲಿ ಸಂಶೋಧನಾ ಪ್ರಬಂಧವನ್ನು ಮಂಡಿಸಿದ್ದು, ಫೆಬ್ರವರಿ ತಿಂಗಳಲ್ಲಿ ನಡೆಯಲಿರುವ ಮಂಗಳೂರು ವಿಶ್ವವಿದ್ಯಾನಿಲಯದ ೪೧ನೇ ಘಟಿಕೋತ್ಸವದಲ್ಲಿ ಪಿ.ಎಚ್.ಡಿ. ಪ್ರಮಾಣ ಪತ್ರವನ್ನು ಸ್ವೀಕರಿಸಲಿದ್ದಾರೆ.