ಸೋಮವಾರಪೇಟೆ, ಫೆ. ೯: ತೋಳೂರುಶೆಟ್ಟಳ್ಳಿಯ ಕೂತಿ ಗ್ರಾಮದಲ್ಲಿ ಬಿಜೆಪಿ ವತಿಯಿಂದ ಗ್ರಾ.ಪಂ. ಮಟ್ಟದ ಸಾಧನಾ ಸಮಾವೇಶವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಅಪ್ಪಚ್ಚು ರಂಜನ್ ಅವರು, ಮಡಿಕೇರಿ ಕ್ಷೇತ್ರದಲ್ಲಿ ಕಳೆದ ೫ ವರ್ಷದಲ್ಲಿ ರೂ. ೧೮೦೦ ಕೋಟಿ ಅನುದಾನ ವಿನಿಯೋಗಿಸ ಲಾಗಿದೆ. ತೋಳೂರುಶೆಟ್ಟಳ್ಳಿ ಗ್ರಾ.ಪಂ.ಗೆ ೩೦ ಕೋಟಿ ಅನುದಾನ ನೀಡಲಾಗಿದೆ. ತೋಳೂರುಶೆಟ್ಟಳ್ಳಿ ಮುಖ್ಯ ರಸ್ತೆ ಅಗಲೀಕರಣ ಹಾಗೂ ಅಭಿವೃದ್ಧಿಗೆ ನಿನ್ನೆಯಷ್ಟೇ ೧ ಕೋಟಿ ಮತ್ತು ದೊಡ್ಡಮನೆಕೊಪ್ಪ ರಸ್ತೆ ಅಭಿವೃದ್ಧಿಗೆ ೧ ಕೋಟಿ ಸೇರಿದಂತೆ ೨ ಕೋಟಿ, ಜಲಜೀವನ್ ಮಿಷನ್ ಅಡಿಯಲ್ಲಿ ತೋಳೂರುಶೆಟ್ಟಳ್ಳಿಗೆ ೨.೬೫ ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದರು.
ರೈತ ಸಮ್ಮಾನ್ ಯೋಜನೆಯಿಂದ ಕೇಂದ್ರ ಸರ್ಕಾರ ವಾರ್ಷಿಕ ೬ ಹಾಗೂ ರಾಜ್ಯ ಸರ್ಕಾರ ೪ ಸಾವಿರ ಸೇರಿದಂತೆ ಒಟ್ಟು ೧೦ ಸಾವಿರ ಹಣವನ್ನು ರೈತರ ಖಾತೆಗೆ ನೇರವಾಗಿ ಜಮೆ ಮಾಡುತ್ತಿದೆ. ಭ್ರಷ್ಟಾಚಾರ ಮುಕ್ತ ಆಡಳಿತ ನಡೆಯುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ರೈತಪರವಾಗಿವೆ. ಗೊಬ್ಬರಕ್ಕೆ ಸಹಾಯಧನ ನೀಡುತ್ತಿದೆ. ಭಾಗ್ಯಲಕ್ಷ್ಮೀ ಯೋಜನೆಯ ಮೂಲಕ ಹೆಣ್ಣುಮಕ್ಕಳ ಜೀವನಕ್ಕೆ ಭದ್ರತೆ ನೀಡಿದೆ ಎಂದರು. ಮೆಡಿಕಲ್ ಕಾಲೇಜಿನಿಂದಾಗಿ ಕೊರೊನಾ ಸಂದರ್ಭ ೪೬ ಸಾವಿರ ರೋಗಿಗಳಿಗೆ ಚಿಕಿತ್ಸೆ ನೀಡಲು ಸಾಧ್ಯವಾಗಿದೆ. ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಿದ್ದೇವೆ. ಮುಂದೆಯೂ ಜನರು ಬೆಂಬಲಿಸುವ ವಿಶ್ವಾಸವಿದೆ ಎಂದರು. ಮುಖ್ಯ ಅತಿಥಿಯಾಗಿದ್ದ ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ. ಮೇದಪ್ಪ ಮಾತನಾಡಿ, ಬಿಜೆಪಿ ಸರ್ಕಾರದ ಅಭಿವೃದ್ಧಿ ಕಾರ್ಯಗಳು ಜನರ ಮನೆ ತಲುಪಿವೆ. ಮೋದಿ ನೇತೃತ್ವದ ಕೇಂದ್ರ ಹಾಗೂ ಬಸವರಾಜ್ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರಗಳು ಅಭಿವೃದ್ಧಿ ಯೊಂದಿಗೆ ಮೂಲಭೂತ ಸೌಕರ್ಯ ಗಳಿಗೆ ಒತ್ತು ನೀಡಿವೆ ಎಂದರು.
ಮAಡಲ ಅಧ್ಯಕ್ಷ ಮನುಕುಮಾರ್ ರೈ ಮಾತನಾಡಿ, ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಭಾರತ ಆತ್ಮನಿರ್ಭರತೆ ಹೊಂದುತ್ತಿದೆ. ದೇಶವು ಪ್ರಗತಿಯತ್ತ ನಡೆಯುತ್ತಿದೆ ಎಂದರು.
ಜಿ.ಪA. ಮಾಜಿ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್ ಮಾತನಾಡಿ, ದೇಶ ಮೊದಲು ಎಂಬ ಆದರ್ಶವನ್ನು ಹೊಂದಿದ ಪಕ್ಷ ಬಿಜೆಪಿ. ದೇಶದ ಪ್ರಧಾನಿಯವರು ತಮ್ಮ ತಾಯಿಯ ಅಂತ್ಯಸAಸ್ಕಾರದ ದಿನವೂ ಸಹ ತಮ್ಮ ಕರ್ತವ್ಯದಿಂದ ವಿಮುಖರಾಗಿರಲಿಲ್ಲ. ದೇಶಕ್ಕಾಗಿ ಕೆಲಸ ಮಾಡುವ ಕಾರ್ಯಕರ್ತರೇ ಪಕ್ಷದ ಆಸ್ತಿ ಎಂದರು.
ಅಧ್ಯಕ್ಷತೆಯನ್ನು ಗ್ರಾಮಾಭಿವೃದ್ದಿ ಸಮಿತಿ ಅಧ್ಯಕ್ಷ ಹೆಚ್.ಡಿ. ಮೋಹನ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಮನುಕುಮಾರ್ ರೈ, ಜಿ.ಪಂ. ಮಾಜಿ ಸದಸ್ಯ ಬಿ.ಜೆ. ದೀಪಕ್, ತಾ.ಪಂ. ಮಾಜಿ ಸದಸ್ಯ ಬಿ.ಎ. ಧರ್ಮಪ್ಪ, ಮಹಿಳಾ ಮೋರ್ಚಾ ಅಧ್ಯಕ್ಷೆ ಮಂಜುಳಾ ಸುಬ್ರಮಣಿ, ಕಾರ್ಯದರ್ಶಿ ಹೆಚ್.ಎನ್. ತಂಗಮ್ಮ, ಎಸ್.ಸಿ. ಮೋರ್ಚಾ ಜಿಲ್ಲಾಧ್ಯಕ್ಷ ಎಸ್.ಎ. ಪ್ರತಾಪ್, ಮಂಡಲ ಅಧ್ಯಕ್ಷ ಹೆಚ್.ಸಿ. ರಾಮಕೃಷ್ಣ, ಗ್ರಾ.ಪಂ. ಅಧ್ಯಕ್ಷ ನವೀನ್, ಸದಸ್ಯರುಗಳು, ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷ ಉಮೇಶ್, ಚೌಡ್ಲು ವಿ.ಎಸ್.ಎಸ್.ಎನ್. ಸದಸ್ಯೆ ಕವಿತಾ ವಿರೂಪಾಕ್ಷ, ಬಿಜೆಪಿ ನಗರಾಧ್ಯಕ್ಷ ಎಸ್.ಆರ್. ಸೋಮೇಶ್, ಶರತ್ ಚಂದ್ರ, ಕುಂದಳ್ಳಿ ದಿನೇಶ್, ಉದಯ ಕುಮಾರ್, ದಿವಾಕರ್, ಬಿ.ಆರ್. ವಿನೋದ್ ಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.