ಮಡಿಕೇರಿ, ಫೆ. ೧೦: ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆ ೨೦೨೨-೨೩ನೇ ಸಾಲಿನ ಡೇಂಗಿ ವಿರೋಧಿ ಮಾಸಾಚರಣೆಯ ಅಂಗವಾಗಿ ‘ಡೇಂಗಿ ನಿಯಂತ್ರಣದಲ್ಲಿ ಪರಿಸರದ ಸ್ವಚ್ಛತೆ ಹಾಗೂ ನನ್ನ ಪಾತ್ರ’ ಎಂಬ ಶೀರ್ಷಿಕೆಯಡಿಯಲ್ಲಿ ನಡೆಸಿದ ಚಿತ್ರಕಲೆ ಸ್ಪರ್ಧೆಯಲ್ಲಿ ಶ್ರೀಮಂಗಲ ಜೆ.ಸಿ. ಶಾಲೆಯ ವಿದ್ಯಾರ್ಥಿನಿ ಕೆ.ಪಿ. ಪೂಜಿತ ಸ್ಪರ್ಧಿಸಿ ಪ್ರಥಮ ಬಹುಮಾನ ಪಡೆದಿದ್ದಾಳೆ.

ಈ ಸಂದರ್ಭ ವೀರಾಜಪೇಟೆ ತಾಲೂಕು ಆರೋಗ್ಯಾಧಿಕಾರಿ ಡಾ. ಹೆಚ್.ಆರ್. ಯತಿರಾಜ್ ಹಾಗೂ ತಾಲೂಕು ಶಿಕ್ಷಣ ಇಲಾಖೆಯ ಕ್ಷೇತ್ರ ಸಮನ್ವಯ ಅಧಿಕಾರಿ ವನಜಾಕ್ಷಿಯವರು ಬಹುಮಾನವನ್ನು ವಿತರಿಸಿದರು.