ಮಡಿಕೇರಿ, ಫೆ. ೧೧: ರಾಷ್ಟಿçÃಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಕೊಡಗು ಜಿಲ್ಲೆಯ ವಿವಿಧ ಹಂತದ ಎಲ್ಲಾ ನ್ಯಾಯಾಲಯಗಳಲ್ಲಿ ‘ರಾಷ್ಟಿçÃಯ ಮೆಗಾ ಲೋಕ್ ಅದಾಲತ್’ ನಡೆಯಿತು. ಒಟ್ಟು ಜಿಲ್ಲೆಯ ೧೩ ನ್ಯಾಯಾಲಯಗಳಲ್ಲಿ ಒಟ್ಟು ೭೭೯೧ ಪ್ರಕರಣಗಳ ಪೈಕಿ ೬೧೯೭ ಪ್ರಕರಣಗಳನ್ನು ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ.

(ಮೊದಲ ಪುಟದಿಂದ) ಇದರಲ್ಲಿ ೪೯೨೫ ಪ್ರಕರಣಗಳು ವ್ಯಾಜ್ಯ ಪೂರ್ವ ಪ್ರಕರಣಗಳಾಗಿದ್ದರೆ, ೨೮೬೬ ನ್ಯಾಯಾಲಯದಲ್ಲಿ ದಾಖಲಾಗಿದ್ದ ಪ್ರಕರಣದ ಅರ್ಜಿಗಳಾಗಿದ್ದವು.

ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಾದ ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬAಧಿಸಿದ ಕ್ಲೇಮುಗಳು, ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬAಧಪಟ್ಟ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣಗಳು, ಖಾಯಂ ಜನತಾ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು, ಚೆಕ್ಕು ಅಮಾನ್ಯದ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಕಾರ್ಮಿಕ ವಿವಾದಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಭೂಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬAಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು, ಸಾರ್ವಜನಿಕ ಉಪಯುಕ್ತತೆ ಸೇವೆಗಳ ಸಂಬAಧಿಸಿದ ಪ್ರಕರಣಗಳು, ರಾಜೀಯಾಗಬಲ್ಲ ಸಿವಿಲ್ ಮತ್ತು ಇತರೆ ಪ್ರಕರಣಗಳು, ವೈವಾಹಿಕ ಕುಟುಂಬ ನ್ಯಾಯಾಲಯ ಪ್ರಕರಣಗಳನ್ನು (ವಿಚ್ಛೇದನ ಹೊರತುಪಡಿಸಿ) ರಾಜೀ ಮೂಲಕ ನ್ಯಾಯಾಧೀಶರು ಇತ್ಯರ್ಥಗೊಳಿಸಿದರು.

ಎಲ್ಲೆಲ್ಲಿ ಎಷ್ಟೆಷ್ಟು ಪ್ರಕರಣ?

ಮಡಿಕೇರಿಯ ಜಿಲ್ಲಾ ಸೆಷನ್ ನ್ಯಾಯಾಲಯದಲ್ಲಿ ಸಲ್ಲಿಕೆಯಾಗಿದ್ದ ೨೩ ಪ್ರಕರಣಗಳ ಪೈಕಿ ೧೮, ಅಡಿಷನಲ್ ಜಿಲ್ಲಾ ಸೆಷನ್ ನ್ಯಾಯಾಲಯದಲ್ಲಿ ೨೯ ರ ಪೈಕಿ ೨೦, ವೀರಾಜಪೇಟೆ ೨ನೇ ಸೆಷನ್ ನ್ಯಾಯಾಲಯದಲ್ಲಿ ೨೯ ರ ಪೈಕಿ ೨ ಪ್ರಕರಣಗಳು ರಾಜಿಗೊಂಡವು.

ಮಡಿಕೇರಿಯ ಸೀನಿಯರ್ ಸಿವಿಲ್ ಹಾಗೂ ಸಿಜೆಎಂ ನ್ಯಾಯಾಲಯದಲ್ಲಿ ೪೧ ಪೈಕಿ ೨೯, ವೀರಾಜಪೇಟೆ ಸೀನಿಯರ್ ಸಿವಿಲ್ ಹಾಗೂ ಸಿಜೆಎಂ ನ್ಯಾಯಾಲಯದಲ್ಲಿದ್ದ ೧೮೨ ರಲ್ಲಿ ೨೨, ಸೋಮವಾರಪೇಟೆ ಸೀನಿಯರ್ ಸಿವಿಲ್ ಹಾಗೂ ಸಿಜೆಎಂ ನ್ಯಾಯಾಲಯದಲ್ಲಿ ೨೧೦ ಪೈಕಿ ೧೭೬, ಮಡಿಕೇರಿಯ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ೧೧೬ ಪೈಕಿ ೧೦೦, ಮಡಿಕೇರಿಯ ಅಡಿಷನಲ್ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ೧೦೭ ಪೈಕಿ ೧೦೦ ಪ್ರಕರಣಗಳು ಸಂಧಾನಗೊAಡವು.

ವೀರಾಜಪೇಟೆ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ೩೫೩ ರಲ್ಲಿ ೧೨೩, ವೀರಾಜಪೇಟೆಯ ಅಡಿಷನಲ್ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ೨೬೩ ರಲ್ಲಿ ೬೬, ಸೋಮವಾರಪೇಟೆ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ೩೫೭ ರಲ್ಲಿ ೧೪೧, ಪೊನ್ನಂಪೇಟೆ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ೨೬೪ರಲ್ಲಿ ೨೫೭, ಕುಶಾಲನಗರ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ೨೬೪ರ ಪೈಕಿ ೨೫೭ ಪ್ರಕರಣಗಳು ಇತ್ಯರ್ಥಗೊಂಡಿವೆ.

ಇದರೊಂದಿಗೆ ದಾಖಲಾಗಿದ್ದ ೪೯೨೫ ವ್ಯಾಜ್ಯ ಪೂರ್ವ ಪ್ರಕರಣಗಳಲ್ಲಿ ೪೯೦೨ ಪ್ರಕರಣಗಳು ಸಂಧಾನ ಮಾಡಿ ಇತ್ಯರ್ಥಪಡಿಸಲಾಗಿದೆ. ಈ ರೀತಿಯ ಪ್ರಕರಣಗಳಲ್ಲಿ ಬ್ಯಾಂಕ್ ಸಂಬAಧಿತ ವ್ಯಾಜ್ಯಗಳು ೧೫೪೯, ಕಾರ್ಮಿಕ ಪರಿಹಾರ ಕಾಯ್ದೆಯಡಿಯಿಂದ ೧೩೮, ತೆರಿಗೆ ಬಾಕಿ ೧೭೦೯, ಎಂ.ಎA.ಆರ್.ಡಿ. ಕಾಯ್ದೆಯ ೧, ಕಂದಾಯ ೧೩೫೯, ಗ್ರಾಹಕ ವಂಚನೆ ೭, ಇತರ ೭೬ ಪ್ರಕರಣಗಳನ್ನು ರಾಜಿ ಮಾಡಲಾಗಿದೆ.