ಮಡಿಕೇರಿ, ಫೆ. ೧೦: ನಾಪೋಕ್ಲುವಿನಲ್ಲಿ ಜರುಗಲಿರುವ ಅಪ್ಪಚೆಟ್ಟೋಳಂಡ ಕಪ್ ಕೊಡವ ಕೌಟುಂಬಿಕ ಹಾಕಿ ಉತ್ಸವದ ಮಾಹಿತಿ ಕೈಪಿಡಿ (ಬ್ರೋಷರ್) ಬಿಡುಗಡೆ ಕಾರ್ಯಕ್ರಮ ತಾ. ೧೧ರಂದು (ಇಂದು) ನಾಪೋಕ್ಲು ಕೊಡವ ಸಮಾಜದಲ್ಲಿ ಜರುಗಲಿದೆ. ಬೆಳಿಗ್ಗೆ ೧೦.೩೦ಕ್ಕೆ ಸಮಾರಂಭ ನಡೆಯಲಿದ್ದು, ಕುಟುಂಬದ ಪಟ್ಟೆದಾರ ಮಿಟ್ಟು ಈರಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ಶಾಸಕರಾದ ಕೆ.ಜಿ. ಬೋಪಯ್ಯ, ಎಂ.ಪಿ. ಸುಜಾ ಕುಶಾಲಪ್ಪ, ಮಾಜಿ ಒಲಂಪಿಯನ್ಗಳಾದ ಡಾ|| ಎ.ಬಿ. ಸುಬ್ಬಯ್ಯ, ಕ|| ಬಾಳೆಯಡ ಸುಬ್ರಮಣಿ, ಕೊಡವ ಹಾಕಿ ಅಕಾಡೆಮಿ ಕಾರ್ಯಾಧ್ಯಕ್ಷ ಮೇಕೇರಿರ ರವಿ ಪೆಮ್ಮಯ್ಯ, ಪದ್ಮಶ್ರೀ ಪ್ರಶಸ್ತಿ ವಿಜೇತೆ ರಾಣಿ ಮಾಚಯ್ಯ, ಮನು ಮುತ್ತಪ್ಪ, ಮತ್ತಿತರರು ಪಾಲ್ಗೊಳ್ಳಲಿದ್ದಾರೆ.