ಮಡಿಕೇರಿ, ಫೆ. ೧೦ : ಅಹ್ಮದಿಯಾ ಮುಸ್ಲಿಂ ಜಮಾಅತ್ ವತಿಯಿಂದ “೩ನೇ ಮಹಾಯುದ್ಧವನ್ನು ನಿಲ್ಲಿಸಿ” ಎಂಬ ವಿಷಯದಡಿ ಭಾರತದ ವಿವಿಧೆಡೆ ಶಾಂತಿಯುತ ಅಭಿಯಾನ ನಡೆಯುತ್ತಿದ್ದು, ಇದರ ಭಾಗವಾಗಿ ಮಡಿಕೇರಿ ನಗರದಲ್ಲೂ ಜಾಗೃತಿ ಕಾರ್ಯಕ್ರಮ ತಾ.೧೧ ರಂದು ನಡೆಯಲಿದೆ ಎಂದು ಸಂಘಟನೆಯ ಮಡಿಕೇರಿಯ ಅಧ್ಯಕ್ಷ ಜಿ.ಎಂ. ಮೊಹಮ್ಮದ್ ಷರೀಫ್ ತಿಳಿಸಿದ್ದಾರೆ.

ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಬೆಳಿಗ್ಗೆ ೧೦ ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ವಿಶ್ವದ ಶಾಂತಿ ಮತ್ತು ಭದ್ರತೆಗೆ ಆದ್ಯತೆ ನೀಡುವ ಅಂಶಗಳನ್ನು ಪ್ರಸ್ತಾಪಿಸಲಾಗುವುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.