ಮಡಿಕೇರಿ, ಫೆ. ೧೧: ಕೊಡಗು ಗೌಡ ವಿದ್ಯಾಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ ತಾ. ೧೨ ರಂದು (ಇಂದು) ನಡೆಯಲಿದೆ.

ಬೆಳಿಗ್ಗೆ ೧೦ ಗಂಟೆಗೆ ಮಡಿಕೇರಿಯ ಗೌಡ ವಿದ್ಯಾ ಸಂಘದ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಶಾಸಕ ಕೊಂಬಾರನ ಜಿ.ಬೋಪಯ್ಯ ಉದ್ಘಾಟಿಸಲಿದ್ದು, ಸಂಘದ ಅಧ್ಯಕ್ಷ ಹೊಸೂರು ರಮೇಶ್ ಜೋಯಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಭಾಗಮಂಡಲ ಕಾವೇರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಕುಂದಲ್ಪಾಡಿ ದಿವಾಕರ್, ರಾಜ್ಯ ಲೆಕ್ಕಪತ್ರ ಇಲಾಖೆ ಸಹಾಯಕ ನಿಯಂತ್ರಕ ಸೂದನ ಎ. ಜಾಜಯ್ಯ, ಕುಂದಚೇರಿಯ ಕೆದಂಬಾಡಿ ಪುಪ್ಪವೇಣಿ ಶಿವಾಜಿ, ನಿವೃತ್ತ ಫಾರ್ಮಸಿಸ್ಟ್ ಕಲ್ಲಂಬಿ ವೆಂಕಪ್ಪ, ತಾಳತ್ತಮನೆಯ ಪಾಣತ್ತಲೆ ಭೀಮಯ್ಯ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.