ಅದಾನಿ ಷೇರು ಕುಸಿತ: ಸುಪ್ರೀಂ ಪ್ರಶ್ನೆ...?

ನವದೆಹಲಿ, ಫೆ. ೧೦: ಅದಾನಿ-ಹಿಂಡೆನ್‌ಬರ್ಗ್ ಬಿಕ್ಕಟ್ಟಿನ ಹಿನ್ನೆಲೆ ಭಾರತೀಯ ಹೂಡಿಕೆದಾರರು ಅನುಭವಿಸಿರುವ ಒಟ್ಟು ನಷ್ಟದ ಪ್ರಮಾಣ ಅನೇಕ ಲಕ್ಷ, ಕೋಟಿಯಷ್ಟಾಗಿದೆ ಎಂದಿರುವ ಸುಪ್ರೀಂಕೋರ್ಟ್, ಅದಾನಿ ಷೇರುಗಳ ಸೋಲಿನಂತಹ ನಿದರ್ಶನಗಳಿಂದ ಭಾರತೀಯ ಹೂಡಿಕೆದಾರರನ್ನು ರಕ್ಷಿಸಲು ನಿಯಂತ್ರಣ ಚೌಕಟ್ಟಿನೊಳಗೆ ಅಗತ್ಯ ಬದಲಾವಣೆಗಳೊಂದಿಗೆ ಮರಳುವಂತೆ ಸೆಬಿಗೆ ಸೂಚಿಸಿದೆ. ಷೇರು ಮಾರುಕಟ್ಟೆ ಈಗ ದೊಡ್ಡ ಹೂಡಿಕೆದಾರರಿಂದ ಮಾತ್ರವಲ್ಲದೆ ಮಧ್ಯಮ ವರ್ಗದವರೂ ಹೂಡಿಕೆ ಮಾಡುವ ಸ್ಥಳವಾಗಿದೆ ಎಂದು ಗಮನಿಸಿದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಜೆಬಿ ಪಾರ್ದಿವಾಲಾ ಅವರನ್ನೊಳಗೊಂಡ ನ್ಯಾಯಪೀಠ, ಇಂತಹ ಹೊಡೆತಗಳಿಂದ ಹೂಡಿಕೆದಾರರನ್ನು ರಕ್ಷಿಸುವುದು ಸುಪ್ರೀಂಕೋರ್ಟ್ನ ಪ್ರಾಥಮಿಕ ಆದ್ಯತೆಯಾಗಿದೆ ಎಂದು ಹೇಳಿತು. ಭಾರತೀಯ ಹೂಡಿಕೆದಾರರು ಅನುಭವಿಸಿದ ಒಟ್ಟು ನಷ್ಟದ ಪ್ರಮಾಣ ಹಲವಾರು ಲಕ್ಷ ಕೋಟಿಗಳಷ್ಟಾಗಿದೆ. ಭವಿಷ್ಯದಲ್ಲಿ (ಇದನ್ನು ಸರಿಪಡಿಸುವ ಬಗ್ಗೆ) ನಾವು ಹೇಗೆ ಖಚಿತಪಡಿಸಿಕೊಳ್ಳುತ್ತೇವೆ? ನಾವು ದೃಢವಾದ ಕಾರ್ಯವಿಧಾನವನ್ನು ಹೊಂದಿದ್ದೇವೆಯೇ? ಇಂದು ಬಂಡವಾಳ ಮನಬಂದAತೆ ಚಲಿಸುತ್ತಿದ್ದು, ಭಾರತೀಯ ಹೂಡಿಕೆಗಳನ್ನು ಹೇಗೆ ರಕ್ಷಿಸಬಹುದು ಎಂಬುದನ್ನು ಖಾತ್ರಿಪಡಿಸಿಕೊಳ್ಳಬೇಕು ಎಂದು ತಿಳಿಸಿತು. ಅದಾನಿ ಸಂಸ್ಥೆಗಳ ಮೇಲಿನ ಹಿಂಡೆನ್‌ಬರ್ಗ್ ಸಂಶೋಧನಾ ವರದಿಯ ತನಿಖೆಗೆ ಕೋರಿ ಸಲ್ಲಿಸಲಾದ ಅರ್ಜಿ ವಿಚಾರಣೆ ಸಂದರ್ಭದಲ್ಲಿ ಮಾತ ನಾಡಿದ ಸಿಜೆಐ ಡಿವೈ ಚಂದ್ರಚೂಡ್, ಇವರು ಸಣ್ಣ ಹೂಡಿಕೆದಾರರು, ಅವರನ್ನು ರಕ್ಷಿಸಲಾಗಿದೆ ಎಂದು ನೀವು ಹೇಗೆ ಖಚಿತಪಡಿಸುತ್ತೀರಿ? ಭವಿಷ್ಯದಲ್ಲಿ ಅವರನ್ನು ಹೇಗೆ ರಕ್ಷಿಸ ಲಾಗುತ್ತದೆ? ಇದರಲ್ಲಿ ಸೆಬಿಗೆ ಯಾವ ರೀತಿಯ ಪಾತ್ರವನ್ನು ನಾವು ಕಲ್ಪಿಸಬೇಕು ಎಂದು ಹೇಳಿದರು. ಅಸ್ತಿತ್ವದಲ್ಲಿರುವ ಹಣಕಾಸು ಕಾರ್ಯವಿಧಾನಗಳನ್ನು ಬಲ ಪಡಿಸಲು ಹಣಕಾಸು ಕ್ಷೇತ್ರದ ತಜ್ಞರ ನ್ನೊಳಗೊಂಡ ಸಮಿತಿಯನ್ನು ರಚಿಸಬೇಕು ಎಂದು ಸಲಹೆ ನೀಡಿದ ನ್ಯಾಯಪೀಠ, ಇಂತಹ ಸಮಸ್ಯೆ ಗಳನ್ನು ವ್ಯವಹರಿಸಲು ಸೆಬಿಯು ತನ್ನಲ್ಲಿರುವ ಶಕ್ತಿ ಮತ್ತು ಅದಕ್ಕೆ ಅಗತ್ಯವಿರುವ ಅಧಿಕಾರಗಳನ್ನು ವಿಶ್ಲೇಷಿಸುವಂತೆ ತಿಳಿಸಿತು. ಮುಂದಿನ ಸೋಮ ವಾರದೊಳಗೆ ವಾಸ್ತವಿಕ ಮತ್ತು ಕಾನೂನಿನ ಅಂಶಗಳ ಬಗ್ಗೆ ಸಂಕ್ಷಿಪ್ತ ಟಿಪ್ಪಣಿ ಸಲ್ಲಿಸುವಂತೆ ಸಾಲಿಸಿಟರ್ ಜನರಲ್‌ಗೆ ನ್ಯಾಯಪೀಠ ಸೂಚಿಸಿತು.

ಬಿಬಿಸಿ ಸಾಕ್ಷö್ಯಚಿತ್ರ ನಿಷೇಧ ಕುರಿತ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ, ಫೆ. ೧೦: ದೇಶದಲ್ಲಿ ಸಂಪೂರ್ಣವಾಗಿ ಬಿಬಿಸಿಗೆ ನಿಷೇಧ ಹೇರಬೇಕು ಎಂದು ಕೋರಲಾದ ಮನವಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದ್ದು, ಇದು ಸಂಪೂರ್ಣ ತಪ್ಪು ಕಲ್ಪನೆ ಎಂದು ಹೇಳಿದೆ. ಈ ಸಂಬAಧ ಹಿಂದೂ ಸೇನೆಯ ಅಧ್ಯಕ್ಷ ವಿಷ್ಣು ಗುಪ್ತಾ ಮತ್ತು ರೈತ ಬೀರೇಂದ್ರ ಕುಮಾರ್ ಸಿಂಗ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಸಂದರ್ಭದಲ್ಲಿ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಂ.ಎA. ಸುಂದ್ರೇಶ್ ಅವರನ್ನೊಳಗೊಂಡ ಪೀಠ ಈ ಆದೇಶ ನೀಡಿದೆ. ಇದು ಸಂಪೂರ್ಣವಾಗಿ ತಪ್ಪಾದ ಕಲ್ಪನೆಯಾಗಿದೆ. ನೀವು ಇದನ್ನು ಹೇಗೆ ವಾದಿಸಬಹುದು? ಇದನ್ನು ನಿಷೇಧಿಸಲು ನೀವು ನ್ಯಾಯಾಲಯವನ್ನು ಕೇಳುತ್ತೀರಾ? ಸಾಕ್ಷ್ಯಚಿತ್ರ ಬದಲಾವಣೆ ತರುತ್ತದೆ ಎಂದು ನೀವು ಭಾವಿಸುತ್ತೀರಾ? ಎಂದು ನ್ಯಾಯಮೂರ್ತಿ ಸಂಜೀವ್ ಖನ್ನಾ ಅರ್ಜಿದಾರರನ್ನು ಪ್ರಶ್ನಿಸಿದರು. ಅರ್ಜಿಯು ಸಂಪೂರ್ಣವಾಗಿ ತಪ್ಪಿನಿಂದ ಕೂಡಿದ್ದು, ಯಾವುದೇ ಅರ್ಹತೆ ಇಲ್ಲ, ಹೀಗಾಗಿ ವಜಾಗೊಳಿಸಲಾಗಿದೆ ಎಂದು ನ್ಯಾಯಾಲಯ ತನ್ನ ಆದೇಶದಲ್ಲಿ ತಿಳಿಸಿದೆ. ೨೦೦೨ರಲ್ಲಿ ಸಂಭವಿಸಿದ್ದ ಗುಜರಾತ್ ಹಿಂಸಾಚಾರ ಕುರಿತ ಇಂಡಿಯಾ ದಿ ಮೋದಿ ಕ್ವಶ್ಚನ್ ಬಿಬಿಸಿ ಸಾಕ್ಷ್ಯಚಿತ್ರವನ್ನು ಭಾರತದಲ್ಲಿ ಪ್ರಸಾರ ಮಾಡದಂತೆ ಸಂಪೂರ್ಣವಾಗಿ ನಿಷೇಧಿಸಬೇಕು ಎಂದು ಕೋರಿ ಅರ್ಜಿದಾರರು ಸುಪ್ರೀಂಕೋರ್ಟ್ ನಲ್ಲಿ ಮನವಿ ಮಾಡಿದರು. ಬಿಬಿಸಿ ಸತ್ಯಕ್ಕೆ ದೂರವಾದ ಮತ್ತು ಭಾರತದ ಸಾರ್ವಭೌಮತ್ವ ಮತ್ತು ಸಮಗ್ರತೆಯ ಮೇಲೆ ದಾಳಿ ಮಾಡುವ ಪಟ್ಟಭದ್ರ ಹಿತಾಸಕ್ತಿ ಹೊಂದಿದೆ ಎಂದು ಅರ್ಜಿಯಲ್ಲಿ ಹೇಳಲಾಗಿತ್ತು. ಬಿಬಿಸಿ ಸಾಕ್ಷ್ಯಚಿತ್ರ ನಿರ್ಬಂಧಿಸುವ ನಿರ್ಧಾರಕ್ಕೆ ಸಂಬAಧಿಸಿದ ಮೂಲ ದಾಖಲೆಗಳನ್ನು ನೀಡುವಂತೆ ಫೆಬ್ರವರಿ ೩ ರಂದು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.ವಿವಾದಾತ್ಮಕ ಸಾಕ್ಷ್ಯಚಿತ್ರದ ಲಿಂಕ್‌ಗಳನ್ನು ನಿರ್ಬಂಧಿಸುವAತೆ ಯೂಟ್ಯೂಬ್ ಮತ್ತು ಟ್ವಿಟರ್‌ಗಳಿಗೆ ಜನವರಿ ೨೧ ರಂದು ಕೇಂದ್ರ ಸರ್ಕಾರ ನಿರ್ದೇಶನಗಳನ್ನು ನೀಡಿತು.

ಮಂಗಳೂರಿಗೆ ಅಮಿತ್ ಶಾ; ರೋಡ್ ಶೋ ರದ್ದು

ಮಂಗಳೂರು, ಫೆ. ೧೦: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ ಮಂಗಳೂರಿಗೆ ಆಗಮಿಸುತ್ತಿದ್ದು, ಭದ್ರತಾ ದೃಷ್ಟಿಯಿಂದ ಮಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದ ರೋಡ್ ಶೋ ರದ್ದುಗೊಳಿಸಲಾಗಿದೆ ಎಂದು ಭಾರತೀಯ ಜನತಾ ಪಕ್ಷದ ಸ್ಥಳೀಯ ಘಟಕ ತಿಳಿಸಿದೆ. ಹಗಲಿನಲ್ಲಿ ಪುತ್ತೂರು ತಾಲೂಕಿನಲ್ಲಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿರುವ ಅಮಿತ್ ಶಾ, ಸಂಜೆಯ ವೇಳೆಗೆ ಮಂಗಳೂರಿಗೆ ಆಗಮಿಸುವ ಸಾಧ್ಯತೆ ಇದೆ. ನಗರದಲ್ಲಿ ಕೇಂದ್ರ ಗೃಹ ಸಚಿವರ ರೋಡ್ ಶೋ ನಡೆಸಲು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕ ಸಿದ್ಧತೆ ಮಾಡಿಕೊಂಡಿತ್ತು. ಆದರೆ ಭದ್ರತೆಯ ಕಾರಣದಿಂದ ರದ್ದುಪಡಿಸಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದಿರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಂಗಳೂರಿನ ಕೆಂಜಾರು ಶ್ರೀದೇವಿ ಕಾಲೇಜಿನಲ್ಲಿ ನಡೆಯಲಿರುವ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಶಾ ಭಾಗವಹಿಸಲಿದ್ದಾರೆ. ಸಂಜೆ ಪುತ್ತೂರಿನಲ್ಲಿ ಕ್ಯಾಂಪ್ಕೋ ಸುವರ್ಣ ಮಹೋತ್ಸವ ಸಮಾರಂಭವನ್ನು ಬಿಜೆಪಿಯ ಹಿರಿಯ ಮುಖಂಡರು ಉದ್ಘಾಟಿಸಲಿದ್ದಾರೆ. ಧರ್ಮಶ್ರೀ ಪ್ರತಿಷ್ಠಾನ ನಿರ್ಮಿಸಿರುವ ಭಾರತ ಮಾತಾ ಮಂದಿರವನ್ನು ಅಮಿತ್ ಶಾ ಉದ್ಘಾಟಿಸಲಿದ್ದು, ಬಳಿಕ ಹನುಮಗಿರಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.

ಬಡ ಹೆಣ್ಣು ಮಕ್ಕಳ ವಿವಾಹಕ್ಕೆ ಹಣ ಬಿಡುಗಡೆ ಮಾಡಿದ ಜಗನ್

ಅಮರಾವತಿ, ಫೆ. ೧೦: ಕಳೆದ ವರ್ಷ ಅಕ್ಟೋಬರ್-ಡಿಸೆಂಬರ್‌ನಲ್ಲಿ ವಿವಾಹವಾದ ಅರ್ಹ ೪,೫೩೬ ಹೆಣ್ಣು ಮಕ್ಕಳಿಗೆ ವೈ.ಎಸ್.ಆರ್. ಕಲ್ಯಾಣ ಮಸ್ತು ಮತ್ತು ವೈಎಸ್ ಆರ್ ಶಾಧಿ ತೋಫ ಯೋಜನೆಗೆ ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಶುಕ್ರವಾರ ರೂ. ೩೮.೧೮ ಕೋಟಿ ಬಿಡುಗಡೆ ಮಾಡಿದ್ದಾರೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರು, ಅಂಗವಿಕಲರು ಹಾಗೂ ಕಟ್ಟಡ ಕಾರ್ಮಿಕ ವರ್ಗದ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಈ ಮೊತ್ತ ನೇರವಾಗಿ ಜಮಾ ಆಗಲಿದೆ. ವರ್ಚುಯಲ್ ಮೂಲಕ ಹಣ ವರ್ಗಾಯಿಸಿ ಮಾತನಾಡಿದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ, ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ, ಬಾಲ್ಯ ವಿವಾಹ ತಡ ಮತ್ತು ಶಾಲೆಗಳಲ್ಲಿ ದಾಖಲಾತಿ ಪ್ರಮಾಣ ಹೆಚ್ಚಿಸುವ ಮತ್ತಿತರ ಉದ್ದೇಶದಿಂದ ಈ ಯೋಜನೆಯನ್ನು ಪ್ರಾರಂಭಿಸಲಾಗಿದೆ ಎಂದು ಹೇಳಿದರು. ದುರ್ಬಲ ವರ್ಗದ ಮಕ್ಕಳನ್ನು ಪ್ರೋತ್ಸಾಹಿಸುವ ಯೋಜನೆಯ ಲಾಭ ಪಡೆಯಲು ವಧು-ವರರು ೧೦ನೇ ತರಗತಿ ತೇರ್ಗಡೆಯಾಗಿರಬೇಕು ಎಂಬ ಷರತ್ತು ವಿಧಿಸಲಾಗಿದೆ ಎಂದು ಅವರು ತಿಳಿಸಿದರು. ಟಿಡಿಪಿ ಆಡಳಿತದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತ ಫಲಾನುಭವಿಗಳಿಗೆ ತಲಾ ರೂ. ೪೦ ಸಾವಿರದಿಂದ ಗರಿಷ್ಠ ೫೦ ಸಾವಿರ ರೂ. ಪ್ರೋತ್ಸಾಹ ಧನ ನೀಡಲಾಗುತಿತ್ತು. ವೈಎಸ್ ಆರ್ ಸಿಪಿ ಸರ್ಕಾರ ಅದನ್ನು ರೂ.೧ ಲಕ್ಷದವರೆಗೆ ಏರಿಸಿದೆ. ಅಂಗವಿಕಲರಿಗೆ ರೂ. ೧.೫ ಲಕ್ಷ ಪ್ರೋತ್ಸಾಹ ಧನ ನೀಡುತ್ತಿದೆ ಎಂದರು. ಅಂತರ್ಜಾತಿ ವಿವಾಹವಾದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಫಲಾನುಭವಿಗಳಿಗೆ ರೂ. ೧.೨ ಲಕ್ಷದವರೆಗೆ ಪ್ರೋತ್ಸಾಹ ಧನ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.