ಕೂಡಿಗೆ, ಫೆ. ೧೦: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭುವನಗಿರಿ ಗ್ರಾಮದಲ್ಲಿ ಉದ್ದೇಶಿಸಿರುವ ಸಂಗೊಳ್ಳಿ ರಾಯಣ್ಣ ಕುರುಬ ಸಮುದಾಯ ಭವನ ನಿರ್ಮಾಣಕ್ಕೆ ಜಿಲ್ಲಾಡಳಿತ ವತಿಯಿಂದ ರೂ. ೫೫ ಲಕ್ಷ ವೆಚ್ಚದ ಪ್ರಸ್ತಾವನೆ ಸಂಬAಧಿಸಿದ ಇಲಾಖೆಗೆ ಕಳುಹಿಸಲಾಗಿದೆ. ಸದ್ಯದಲ್ಲಿ ಸಮುದಾಯ ಭವನ ಕಾಮಗಾರಿಯು ಆರಂಭಗೊಳ್ಳಲಿದೆ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ತಿಳಿಸಿದರು. ಭುವನಗಿರಿಗೆ ಭೇಟಿ ನೀಡಿದ ಸಂದರ್ಭ ಈ ಬಗ್ಗೆ ಮಾತನಾಡಿದ ಅವರು, ಜಿಲ್ಲಾ ಸಂಗೊಳ್ಳಿ ರಾಯಣ್ಣ ಹಿತರಕ್ಷಣಾ ವೇದಿಕೆಯ ಮನವಿ ಹಾಗೂ ಸಂಬAಧಿಸಿದ ಸಚಿವರು ಕೂಡಿಗೆಗೆ ಭೇಟಿ ನೀಡಿದ ಸಂದರ್ಭ ತಿಳಿಸಿದಂತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭುವನಗಿರಿ ಗ್ರಾಮದಲ್ಲಿ ನೂತನವಾಗಿ ಸಮುದಾಯ ಭವನದ ಕಟ್ಟಡವನ್ನು ಕಟ್ಟಲು ಜಿಲ್ಲಾಡಳಿತದ ಮೂಲಕ ಪ್ರಸ್ತಾವನೆ ಹೋಗಿರುವ ಹಿನ್ನೆಲೆ ಸಂಬAಧಿಸಿದ ಇಲಾಖೆಯ ಮೂಲಕ ಹಣ ಬಿಡುಗಡೆಗೊಳ್ಳಲಿದೆ. ಅದರ ಮುಖೇನ ಕ್ರಿಯಾ ಯೋಜನೆಯ ಅನುಗುಣವಾಗಿ ಸಮುದಾಯ ಭವನ ಕಟ್ಟಡ ನಿರ್ಮಾಣದ ಯೋಜನೆಯನ್ನು ಕಾರ್ಯಗತಗೊಳಿಸಲಾಗುವುದು ಎಂದು ಮಾಹಿತಿ ನೀಡಿದರು. ಈ ಸಂದರ್ಭ ಜಿಲ್ಲಾ ಸಂಗೊಳ್ಳಿ ರಾಯಣ್ಣ ಕುರುಬ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಡಿ.ಆರ್. ಪ್ರಭಾಕರ್, ಸಂಘಟನಾ ಕಾರ್ಯದರ್ಶಿ ಕೆ.ಆರ್. ರವಿ, ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸದಸ್ಯ ಗಿರೀಶ್, ಕುಮಾರ್, ಗ್ರಾಮ ಪ್ರಮುಖರಾದ ದೊಡ್ಡಯ್ಯ, ಮಹದೇವ, ಬರಮಣ್ಣ ಬೆಟಗೇರಿ, ಅಶ್ವಿನಿ ಕುಮಾರ್, ಸುಬ್ರಮಣ್ಯಿ, ರವಿಚಂದ್ರ ಇನ್ನಿತರರು ಇದ್ದರು.