ಮಡಿಕೇರಿ,ಫೆ.೧೩: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ವತಿಯಿಂದ ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸಲಿರುವ ಕಿರಿಯ ಶಿಷ್ಯವೇತನ ಸಂಶೋಧಕರ ಸಹಾಯಕರ (ಜೆಆರ್‌ಎಫ್) ಮತ್ತು ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ರಾಷ್ಟç ಮಟ್ಟದ ಅರ್ಹತಾ ಪರೀಕ್ಷೆ (ಯುಜಿಸಿ-ನೆಟ್)ಗೆ ಮತ್ತು ಕರ್ನಾಟಕ ಸರ್ಕಾರವು ನಡೆಸಲಿರುವ ರಾಜ್ಯ ಮಟ್ಟದ ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್)ಗೆ ೪೫ ದಿನಗಳ ತರಬೇತಿ ಶಿಬಿರ ಏರ್ಪಡಿಸಿದೆ.

ಆಸಕ್ತರು ತಾ. ೧೫ ರೊಳಗೆ ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಚೇರಿಯಲ್ಲಿ ಬೆಳಗ್ಗೆ ೧೦ ಗಂಟೆಯಿAದ ಸಂಜೆ ೫ ಗಂಟೆಯೊಳಗಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ೦೮೨೧-೨೫೧೫೯೪೪/ ೯೯೬೪೭೬೦೦೯೦ ನ್ನು ಸಂಪರ್ಕಿಸಬಹುದು ಎಂದು ಕರಾಮುವಿ ಕುಲಸಚಿವರಾದ ಪ್ರೊ.ಕೆ.ಎಲ್.ಎನ್.ಮೂರ್ತಿ ತಿಳಿಸಿದ್ದಾರೆ.