ಗೋಣಿಕೊಪ್ಪಲು, ಫೆ. ೧೨: ಜೆಡಿಎಸ್ ಪಕ್ಷದ ಹಿರಿಯ ಮುಖಂಡ ರಾಜ್ಯ ವಕ್ತಾರರಾಗಿರುವ ಮೇರಿಯಂಡ ಸಂಕೇತ್ ಪೂವಯ್ಯ ಪಕ್ಷಕ್ಕೆ ರಾಜೀನಾಮೆ ನೀಡುವ ವದಂತಿಯ ಹಿನ್ನೆಲೆಯಲ್ಲಿ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ತಾಲೂಕು ಅಧ್ಯಕ್ಷ ಮಂಜುನಾಥ್ ನೇತೃತ್ವದಲ್ಲಿ ಹಲವು ಪದಾಧಿಕಾರಿಗಳು ಸಂಕೇತ್ ಪೂವಯ್ಯನವರನ್ನು ಭೇಟಿ ಮಾಡಿ ವಿಚಾರ ವಿನಿಮಯ ನಡೆಸಿದರು.
ಈ ವೇಳೆ ಜೆಡಿಎಸ್ ಪಕ್ಷದ ರಾಜ್ಯ ವಕ್ತಾರರಾದ ಮೇರಿಯಂಡ ಸಂಕೇತ್ ಪೂವಯ್ಯ, ಮುಂದಿನ ಚುನಾವಣೆಯಲ್ಲಿ ಪ್ರಮುಖವಾಗಿ ವೀರಾಜಪೇಟೆ ವಿಧಾನ ಸಭಾ ಕ್ಷೇತ್ರದಲ್ಲಿ ಜಾತ್ಯತೀತ ಮತಗಳು ಹರಿದು ಹಂಚಿ ಹೋಗುತ್ತಿರುವ ಬಗ್ಗೆ ಸೇರಿದಂತೆ ಇನ್ನಿತರ ರಾಜಕೀಯ ವಿದ್ಯಮಾನಗಳ ಬಗ್ಗೆ ಮಾಜಿ ಮುಖ್ಯ ಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಸದ್ಯದಲ್ಲಿಯೇ ಭೇಟಿ ಮಾಡಿ ವಿಚಾರ ವಿನಿಮಯ ಮಾಡುತ್ತೇನೆ. ಇವರ ಸೂಚನೆ ಹಾಗೂ ಸಲಹೆಯ ಮೇರೆಗೆ ಮುಂದಿನ ನಿರ್ಧಾರ ತೆಗೆದು ಕೊಳ್ಳುವುದಾಗಿ ಕಾರ್ಯಕರ್ತರಿಗೆ ಹಾಗೂ ನಾಯಕರಿಗೆ ಮನವರಿಕೆ ಮಾಡಿದರು.
ವೀರಾಜಪೇಟೆ ತಾಲೂಕು ಜೆಡಿಎಸ್ ಅಧ್ಯಕ್ಷ ಪಿ.ಎ. ಮಂಜುನಾಥ್ ಮಾತನಾಡಿ, ಯಾವುದೇ ಕಾರಣಕ್ಕೂ ಪಕ್ಷ ಬಿಡದಂತೆ ಮನವಿ ಮಾಡಿದರು.
ಈ ವೇಳೆ ಪಕ್ಷದ ಮುಖಂಡರಾದ ಪಂದ್ಯAಡ ರವಿ ಮಾದಪ್ಪ, ಯೋಗೇಶ್ ನಾಯ್ಡು, ಪಾಣತ್ತಲೆ ಸತ್ಯ, ಸಕ್ಲೇನ್, ಸೈಫೂದಿನ್ ಚಾಮಿಯಾಲ, ಚಿಲ್ಲವಂಡ ಗಣಪತಿ, ಬಾಳೆಕುಟ್ಟೀರ ದಿನಿ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.