ಏರೋ ಇಂಡಿಯಾ ನವ ಭಾರತದ ಶಕ್ತಿಯನ್ನು ತೋರಿಸುತ್ತಿದೆ: ಪ್ರಧಾನಿ ಮೋದಿ

ಬೆಂಗಳೂರು, ಫೆ. ೧೩: ಏರೋ ಇಂಡಿಯಾ ಶೋ ನವ ಭಾರತದ ಶಕ್ತಿಯನ್ನು ತೋರಿಸುತ್ತಿದ್ದು, ಇದು ನಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ. ಬೆಂಗಳೂರು ಹೊರವಲಯದಲ್ಲಿರುವ ಯಲಹಂಕ ವಾಯುನೆಲೆಯಲ್ಲಿ ಏರೋ ಇಂಡಿಯಾ ವೈಮಾನಿಕ ಪ್ರದರ್ಶನದ ೧೪ನೇ ಆವೃತ್ತಿಗೆ ಚಾಲನೆ ನೀಡಿದ ಬಳಿಕ ದೇಶದ ಜನತೆಯನ್ನುದ್ದೇಶಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾಷಣ ಮಾಡಿದರು. ನವಭಾರತದ ಸಾಮರ್ಥ್ಯಕ್ಕೆ ಬೆಂಗಳೂರಿನ ಆಗಸ ಸಾಕ್ಷಿಯಾಗುತ್ತಿದೆ. ಹೊಸ ಎತ್ತರವೇ ನವ ಭಾರತದ ಸತ್ಯ ಎಂಬುದಕ್ಕೆ ಬೆಂಗಳೂರಿನ ಆಕಾಶವೇ ಸಾಕ್ಷಿಯಾಗಿದೆ. ಇಂದು, ರಾಷ್ಟçವು ಹೊಸ ಎತ್ತರವನ್ನು ತಲುಪುತ್ತಿದೆ ಎಂದು ಹೇಳಿದರು. ಏರೋ ಇಂಡಿಯಾವನ್ನು ಒಂದು ಸಮಯದಲ್ಲಿ ಕೇವಲ ಪ್ರದರ್ಶನಕ್ಕೆ ಸೀಮಿತ ಎಂದು ಭಾವಿಸಲಾಗುತ್ತಿತ್ತು. ಕಳೆದ ಕೆಲ ವರ್ಷಗಳಿಂದ ದೃಷ್ಟಿಕೋನ ಬದಲಾಗಿದೆ. ನವಭಾರತದ ನವಮಾರ್ಗವನ್ನು ಏರೋ ಇಂಡಿಯಾ ಪ್ರತಿಫಲಿಸುತ್ತದೆ. ಇವತ್ತು ಇದು ಕೇವಲ ಶೋ ಮಾತ್ರವಲ್ಲ ಭಾರತದ ಶಕ್ತಿಯೂ ಆಗಿದೆ. ಭಾರತದ ರಕ್ಷಣಾ ಉದ್ಯಮದ ಬೆಳವಣಿಗೆ ಮತ್ತು ಆತ್ಮವಿಶ್ವಾಸಕ್ಕೆ ಪ್ರತೀಕವಾಗಿದೆ ಎಂದು ತಿಳಿಸಿದರು.

ಮಹಿಳೆಯರಿಗೆ ೧ ಲಕ್ಷ, ರೈತರಿಗೆ ೫ ಲಕ್ಷ ರೂ. ಬಡ್ಡಿರಹಿತ ಸಾಲ: ಸಿದ್ದರಾಮಯ್ಯ

ಕೋಲಾರ, ಫೆ. ೧೩: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಷರತ್ತುಬದ್ಧ ಸಾಲಮನ್ನಾ ಮಾಡಲಾಗುವುದು ಮತ್ತು ಮಹಿಳೆಯರಿಗೆ ನೀಡಲಾಗುತ್ತಿರುವ ೫೦ ಸಾವಿರ ರೂಪಾಯಿ ಬಡ್ಡಿರಹಿತ ಸಾಲವನ್ನು ಒಂದು ಲಕ್ಷ ರೂಪಾಯಿಗೆ ಏರಿಸುವುದಾಗಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸೋಮವಾರ ಭರವಸೆ ನೀಡಿದ್ದಾರೆ. ಇಂದು ಕೋಲಾರದಲ್ಲಿ ಮಹಿಳಾ ಸಮಾವೇಶದಲ್ಲಿ ಮಾತನಾಡಿದ ಮಾಜಿ ಸಿಎಂ ಅವರು, ಸರಿಯಾಗಿ ಸಾಲದ ಕಂತು ಕಟ್ಟುತ್ತಿರುವ ರೈತರ ಸಾಲವನ್ನು ಮನ್ನಾ ಮಾಡಲಾಗುವುದು. ಆದರೆ ಕಾಂಗ್ರೆಸ್ ಅಧಿಕಾರಕ್ಕೆ ಬರುವವರೆಗೂ ಸಾಲದ ಕಂತು ಕಟ್ಟಿ ಎಂದು ಹೇಳಿದರು. ಮಹಿಳೆಯರಿಗೆ ನೀಡಲಾಗುತ್ತಿರುವ ೫೦ ಸಾವಿರ ರೂ. ಬಡ್ಡಿರಹಿತ ಸಾಲವನ್ನು ಒಂದು ಲಕ್ಷ ರೂಪಾಯಿಗೆ ಏರಿಸಲಾಗುವುದು. ಅಷ್ಟೇ ಅಲ್ಲ ರೈತರಿಗೆ ನೀಡಲಾಗುತ್ತಿರುವ ಬಡ್ಡಿರಹಿತ ಸಾಲವನ್ನು ೫ ಲಕ್ಷಕ್ಕೆ ಏರಿಸುತ್ತೇವೆ. ಶೇ. ೩ರ ಬಡ್ಡಿಯಲ್ಲಿ ರೈತರಿಗೆ ನೀಡುವ ಸಾಲವನ್ನು ೧೦ ಲಕ್ಷದಿಂದ ೨೦ ಲಕ್ಷ ರೂಪಾಯಿಗೆ ಏರಿಸುತ್ತೇವೆ ಎಂದು ಸಿದ್ದರಾಮಯ್ಯ ಘೋಷಿಸಿದರು. ಬಡ್ಡಿರಹಿತ ಸಾಲದ ಪ್ರಮಾಣ ಏರಿಸುವ ಬಗ್ಗೆ ಮತ್ತು ಸಾಲ ಮನ್ನಾ ಬಗ್ಗೆ ಪಕ್ಷದ ಪ್ರಣಾಳಿಕೆ ಸಮಿತಿ ಅಧ್ಯಕ್ಷರ ಜೊತೆ ಚರ್ಚಿಸಿ ತೀರ್ಮಾನ ಮಾಡಲಾಗುವುದು. ಕೋಲಾರದಲ್ಲಿ ಎಪಿಎಂಸಿ ಮಾರುಕಟ್ಟೆಗೆ ೧೦೦ ಎಕರೆ ಜಮೀನು ಮಂಜೂರು ಮಾಡುತ್ತೇವೆ, ಟೊಮ್ಯಾಟೊ ಮತ್ತು ಮಾವು ಸಂಸ್ಕರಣಾ ಘಟಕ ಮಾಡಿಕೊಡುತ್ತೇವೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ವಾಪಸ್ ಪಡೆಯುತ್ತೇವೆ, ಹಾಲಿಗೆ ಪ್ರೋತ್ಸಾಹ ಧನವನ್ನು ೬ ರೂಪಾಯಿಗೆ ಹೆಚ್ಚಿಸುತ್ತೇವೆ ಎಂದು ಸಿದ್ದರಾಮಯ್ಯ ಭರವಸೆ ನೀಡಿದರು.

ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿಗೆ ೪ ವರ್ಷ ಜೈಲು ಶಿಕ್ಷೆ!

ಬೆಂಗಳೂರು, ಫೆ. ೧೩: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬAಧಿಸಿದAತೆ ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೋಮವಾರ ೪ ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಎಂ.ಪಿ. ಕುಮಾರಸ್ವಾಮಿ ಅವರು ಹೂವಪ್ಪಗೌಡ ಎಂಬವರಿAದ ೧.೩೫ ಕೋಟಿ ರೂಪಾಯಿ ಸಾಲ ಪಡೆದಿದ್ದರು. ಈ ಹಣ ಪಾವತಿ ಸಂಬAಧ ಶಾಸಕ ಕುಮಾರಸ್ವಾಮಿ ಅವರು ಹೂವಪ್ಪಗೌಡ ಅವರಿಗೆ ನೀಡಿದ್ದ ೮ ಚೆಕ್ ಗಳು ಸಹ ಬೌನ್ಸ್ ಆಗಿತ್ತು. ಈ ಸಂಬAಧ ಹೂವಪ್ಪಗೌಡ ಅವರು ಕುಮಾರಸ್ವಾಮಿ ವಿರುದ್ಧ ನ್ಯಾಯಾಲಯದಲ್ಲಿ ೮ ಕೇಸ್ ದಾಖಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜೆ.ಪ್ರೀತ್ ಅವರು, ಆರೋಪಿ ಶಾಸಕರಿಗೆ ೮ ಕೇಸ್ ಗಳಲ್ಲಿ ತಲಾ ೬ ತಿಂಗಳು ಜೈಲು ಶಿಕ್ಷೆ ವಿಧಿಸಿದ್ದಾರೆ. ಸಾಲ ಮರುಪಾವತಿ ಮಾಡದಿದ್ದಲ್ಲಿ ತಲಾ ೬ ತಿಂಗಳು ಒಟ್ಟು ೪ ವರ್ಷ ಜೈಲು ಶಿಕ್ಷೆ ಅನುಭವಿಸುವಂತೆ ಶಿಕ್ಷೆ ಪ್ರಕಟಿಸಲಾಗಿದೆ.

ದೆಹಲಿ ಮೇಯರ್ ಚುನಾವಣೆ ಮತ್ತೆ ಮುಂದೂಡಿಕೆ

ನವದೆಹಲಿ, ಫೆ. ೧೩: ಇದೇ ಗುರುವಾರ ನಡೆಯಬೇಕಿದ್ದ ದೆಹಲಿಯ ಮೇಯರ್ ಚುನಾವಣೆ ಮತ್ತೆ ಮುಂದೂಡಿಕೆಯಾಗಿದ್ದು, ಆಡಳಿತಾರೂಢ ಆಮ್ ಆದ್ಮಿ ಪಕ್ಷ ಹಾಗೂ ಭಾರತೀಯ ಜನತಾ ಪಾರ್ಟಿ (ಃಎP) ನಡುವಿನ ಹಗ್ಗಜಗ್ಗಾಟ ಇದೀಗ ಸುಪ್ರೀಂ ಕೋರ್ಟ್ ಅಂಗಳಕ್ಕೆ ಹೋಗಿದೆ. ದೆಹಲಿ ಮೇಯರ್ ಚುನಾವಣೆ ವಿಚಾರವಾಗಿ ಸುಪ್ರೀಂ ಕೋರ್ಟ್ ಶುಕ್ರವಾರ ವಿಚಾರಣೆ ನಡೆಸಲಿರುವುದರಿಂದ ಚುನಾವಣೆಯನ್ನು ಮುಂದೂಡಲಾಗಿದೆ. ತಾ. ೧೬ರ ಚುನಾವಣೆಯನ್ನು ತಾ. ೧೭ ರ ನಂತರದ ದಿನಾಂಕಕ್ಕೆ ಮುಂದೂಡುವುದಾಗಿ ದೆಹಲಿ ಲೆಫ್ಟಿನೆಂಟ್ ಗವರ್ನರ್ ಕಚೇರಿ ಸುಪ್ರೀಂ ಕೋರ್ಟ್ಗೆ ತಿಳಿಸಿದೆ. ಮೇಯರ್ ಚುನಾವಣೆಯನ್ನು ಶೀಘ್ರವಾಗಿ ನಡೆಸುವಂತೆ ಕೋರಿ ಆಪ್ ಮೇಯರ್ ಅಭ್ಯರ್ಥಿ ಶೆಲ್ಲಿ ಒಬೆರಾಯ್ ಅವರು ಸಲ್ಲಿಸಿದ್ದ ಮನವಿಯನ್ನು ತಾ. ೧೭ಕ್ಕೆ ಮುಂದೂಡಿದ್ದು, ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠವು, ನಾಮನಿರ್ದೇಶಿತ ಸದಸ್ಯರು ಚುನಾವಣೆಯಲ್ಲಿ ಮತ ಚಲಾಯಿಸುವಂತಿಲ್ಲ ಎಂದು ಅವರು ತಕರಾರು ಅರ್ಜಿ ಸಲ್ಲಿಸಿದ್ದರು. ಇದೇ ವಿಚಾರವಾಗಿ ನಡೆದ ವಿಚಾರಣೆಯಲ್ಲಿ ನಾಮನಿರ್ದೇಶಿತ ಸದಸ್ಯರು ಚುನಾವಣೆಗೆ ಹೋಗುವಂತಿಲ್ಲ. ಸಾಂವಿಧಾನಿಕ ನಿಬಂಧನೆಯು ತುಂಬಾ ಸ್ಪಷ್ಟವಾಗಿದೆ ಎಂಬ ಆಮ್ ಆದ್ಮಿ ಪಕ್ಷದ ಸಮರ್ಥನೆಯನ್ನು ಗಮನಿಸಿದೆ. ಅಂತೆಯೇ ಸುಪ್ರೀಂ ಕೋರ್ಟ್ ಪೀಠವು ಶುಕ್ರವಾರ ವಿಚಾರಣೆಗೆ ವಿಷಯವನ್ನು ಮುಂದೂಡುತ್ತಿದ್ದAತೆ, ದೆಹಲಿ ಲೆಫ್ಟಿನೆಂಟ್ ಗವರ್ನರ್ ಕಚೇರಿಯನ್ನು ಪ್ರತಿನಿಧಿಸುವ ಹೆಚ್ಚುವರಿ ಸಾಲಿಸಿಟರ್ ಜನರಲ್ ಸಂಜಯ್ ಜೈನ್ ತಾ. ೧೬ರ ಚುನಾವಣೆಯನ್ನು ತಾ. ೧೭ರ ನಂತರದ ದಿನಾಂಕಕ್ಕೆ ಮುಂದೂಡಲಾಗುವುದು ಎಂದು ಹೇಳಿದರು. ಒಬೆರಾಯ್ ಅವರ ಮನವಿಯ ಕುರಿತು ಫೆಬ್ರವರಿ ೮ ರಂದು ಸುಪ್ರೀಂ ಕೋರ್ಟ್ ಲೆಫ್ಟಿನೆಂಟ್ ಗವರ್ನರ್ ಕಚೇರಿ, ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ಯ ಪ್ರೊ ಟೆಮ್ ಪ್ರಿಸೈಡಿಂಗ್ ಅಧಿಕಾರಿ ಸತ್ಯ ಶರ್ಮಾ ಮತ್ತು ಇತರರಿಂದ ಪ್ರತಿಕ್ರಿಯೆಗಳನ್ನು ಕೇಳಿತ್ತು. ಇದೀಗ ಮತ್ತೆ ಮೇಯರ್ ಆಯ್ಕೆ ಚುನಾವಣೆ ಮುಂದೂಡಲ್ಪಟ್ಟಿದೆ. ಆಮ್ ಆದ್ಮಿ ಪಕ್ಷ (ಎಎಪಿ) ಮತ್ತು ಬಿಜೆಪಿ ನಡುವಿನ ಸುದೀರ್ಘ ಜಗಳದ ನಡುವೆ ಮೇಯರ್ ಆಯ್ಕೆಗೆ ಮೂರು ಬಾರಿ ವಿಫಲ ಪ್ರಯತ್ನಗಳು ನಡೆದಿದ್ದವು. ಮೂರು ಪ್ರಯತ್ನಗಳು ವಿಫಲವಾಗಿ ಪದೇ ಪದೇ ಚುನಾವಣೆ ಮುಂದೂಡಿಕೆಯಾಗಿತ್ತು.