ಮಡಿಕೇರಿ, ಫೆ. ೧೩: ಮಡಿಕೇರಿ ತಾಲೂಕಿನ ಚೆಂಬು ಗ್ರಾಮ ಪಂಚಾಯಿತಿ ಆವರಣದಲ್ಲಿ ಕೊಡಗು ಜಿಲ್ಲಾ ಆಸ್ಪತ್ರೆಯ ರಕ್ತ ನಿಧಿ ಕೇಂದ್ರದ ವತಿಯಿಂದ ಭಾರತ್ ಸ್ಕೌಟ್ ಮತ್ತು ಗೈಡ್ಸ್, ಶ್ರೀ ಭಗವಾನ್ ಸಂಘ ಚೆಂಬು ಗ್ರಾಮ ಮತ್ತು ಮಿತ್ರಕೂಟ ಕ್ರೀಡಾ ಸಂಘಗಳ ಸಹಯೋಗದಲ್ಲಿ ರಕ್ತದಾನ ಶಿಬಿರ ತಾ. ೧೫ ರಂದು ನಡೆಯಲಿದೆ. ಹೆಚ್ಚಿನ ಮಾಹಿತಿಗೆ ಧನಂಜಯ ಎಂ. (೯೮೪೪೪೬೧೭೭೭) ಅವರನ್ನು ಸಂಪರ್ಕಿಸಬಹುದಾಗಿದೆ.