ಕುಶಾಲನಗರ, ಫೆ.೧೨ : ಕುಶಾಲನಗರ ಶ್ರೀ ಮುತ್ತಪ್ಪ ದೇವಾಲಯದ ತೆರೆ ಮಹೋತ್ಸವ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಿದವು. ಕುಶಾಲನಗರ ಬೈಚನಹಳ್ಳಿ ಯೋಗಾನಂದ ಬಡಾವಣೆಯಲ್ಲಿರುವ ದೇವಾಲಯದಲ್ಲಿ ಬೆಳಿಗ್ಗೆ ಗಣಪತಿ ಹೋಮ, ನಂತರ ಧ್ವಜಾರೋಹಣ ನಡೆಯಿತು. ಎರಡು ದಿನಗಳ ಕಾಲ ನಡೆಯಲಿರುವ ತೆರೆ ಮಹೋತ್ಸವ ಹಿನ್ನೆಲೆಯಲ್ಲಿ ಕುಶಾಲನಗರ ಅಯ್ಯಪ್ಪ ಸ್ವಾಮಿ ದೇವಾಲಯ ಬಳಿ ಕಾವೇರಿ ನದಿಗೆ ಪೂಜೆ ಸಲ್ಲಿಸಿ ನಂತರ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ಮೂಲಕ ತೆರಳಿ ಮುತ್ತಪ್ಪ ದೇವಾಲಯ ತನಕ ಸಾಗಿದರು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಪಾಲ್ಗೊಂಡಿದ್ದರು.
ಮುತ್ತಪ್ಪ ಸೇವಾ ಟ್ರಸ್ಟ್ ಅಧ್ಯಕ್ಷರಾದ ಹರೀಂದ್ರನ್, ಉಪಾಧ್ಯಕ್ಷರಾದ ಆರ್ ಚಂದ್ರ, ರಾಜೇಶ್, ಬಳಪಂಡ ಪೊನ್ನು ಅವರ ನೇತೃತ್ವದಲ್ಲಿ ಸಂಜೆ ಮುತ್ತಪ್ಪನ ವೆಲ್ಲಾಟಮ್, ತಾಲಪೊಲಿ ಸಿಡಿಮದ್ದು ಪ್ರದರ್ಶನ ನಂತರ ಅನ್ನದಾನ ಕಾರ್ಯಕ್ರಮ ಜರುಗಿತು. ರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.