ಗೋಣಿಕೊಪ್ಪಲು, ಫೆ. ೧೩: ಪೊನ್ನಂಪೇಟೆ ಕಾಟ್ರಕೊಲ್ಲಿಯ ಮಾತಾಯಿ ಪುರುಷರ ಸ್ವಸಹಾಯ ಸಂಘದಿAದ ೧೭ನೇ ವರ್ಷದ ಮಹಾಶಿವರಾತ್ರಿ ಅಂಗವಾಗಿ ವಿವಿಧ ಕಾರ್ಯಕ್ರಮ ತಾ. ೧೮ ರಂದು ಸಂಜೆ ೭ ಗಂಟೆಯಿAದ ಪೊನ್ನಂಪೇಟೆ ಬಸ್ ನಿಲ್ದಾಣದಲ್ಲಿ ನಡೆಯಲಿದೆ ಎಂದು ಸಂಘದ ಸದಸ್ಯ ಎಂ.ಬಿ. ಅನೀಶ್ ತಿಳಿಸಿದ್ದಾರೆ.

ಪೊನ್ನಂಪೇಟೆಯಲ್ಲಿ ಆಯೋಜಿಸಿದ್ದ ಮಾದ್ಯಮಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಸಂಘವು ಕಳೆದ ೧೭ ವರ್ಷಗಳಿಂದ ಉತ್ತಮ ರೀತಿಯಲ್ಲಿ ಮಹಾಶಿವರಾತ್ರಿಯನ್ನು ಯಶಸ್ವಿಯಾಗಿ ನಡೆಸಿಕೊಂಡು ಬಂದಿದೆ. ಈ ಬಾರಿ ಸ್ಥಳೀಯ ಮಕ್ಕಳಿಗೆ ಪ್ರೋತ್ಸಾಹ ನೀಡುವ ಸಲುವಾಗಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಳ್ಳಬೇಕು. ಮೊದಲು ನೋಂದಾಯಿಸಿದ ೩೦ ಕಾರ್ಯಕ್ರಮಗಳಿಗೆ ಮಾತ್ರ ಅವಕಾಶ ನೀಡಲಾಗುವುದು. ತಾ. ೧೬ ರೊಳಗೆ ತಮ್ಮ ಹೆಸರನ್ನು ೯೯೦೨೧೧೦೮೦೪-೯೬೧೧೨೫೦೯೬೨ ನಂಬರ್‌ನಲ್ಲಿ ನೋಂದಾಯಿಸಿಕೊಳ್ಳಬೇಕು ಎಂದರು.

ಮಾಜಿ ಅಧ್ಯಕ್ಷ ಕೆ.ಬಿ. ವಿನು ಮಾತನಾಡಿ, ಸರ್ಕಾರಿ ಶಾಲಾ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಸಲುವಾಗಿ ೭ನೇ, ೧೦ನೇ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಲ್ಲಿ ೨೦೨೧-೨೨ನೇ ಸಾಲಿನಲ್ಲಿ ಅತೀ ಹೆಚ್ಚು ಅಂಕ ಪಡೆದ ಪೊನ್ನಂಪೇಟೆ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಗುತ್ತದೆ. ಕಾರ್ಯಕ್ರಮದ ಅಂಗವಾಗಿ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಸಾಧಕರನ್ನು ಗುರುತಿಸಿ ಸನ್ಮಾನಿಸಲಾಗುವುದು ಎಂದರು.

ಗೋಷ್ಠಿಯಲ್ಲಿ ಮಾತಾಯಿ ಪುರುಷರ ಸ್ವಸಹಾಯ ಸಂಘದ ಅಧ್ಯಕ್ಷ ಪಿ.ಎಂ. ಮಹಮ್ಮದ್, ಮಾಜಿ ಅಧ್ಯಕ್ಷ ಸಾದಿಕ್, ಮಾಜಿ ಖಜಾಂಚಿ ಉಮ್ಮರ್ ಕೆ.ಹೆಚ್. ಉಪಸ್ಥಿತರಿದ್ದರು.