ಮಡಿಕೇರಿ, ಫೆ. ೧೩: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕೇಂದ್ರ ಮಡಿಕೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ವಿದ್ಯಾರ್ಥಿ ಗಳು ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಉಪಕುಲಪತಿ ಪ್ರೊ. ಶರಣಪ್ಪ ವಿ. ಹುಲಸೆ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು “ಉನ್ನತ ಶಿಕ್ಷಣ ಎಲ್ಲರಿಗೂ ಎಲ್ಲೆಡೆ” ಎಂಬ ಘೋಷವಾಕ್ಯದೊಂದಿಗೆ ಕರ್ನಾಟಕದಾದ್ಯಂತ ಪ್ರಸ್ತುತ ಜಿಲ್ಲಾ ಕೇಂದ್ರಗಳಲ್ಲಿ ೨೩ ಪ್ರಾದೇಶಿಕ ಕೇಂದ್ರಗಳನ್ನು ತೆರೆದು ವಿದ್ಯಾರ್ಥಿಗಳಿಗೆ ‘ರೆಗ್ಯೂಲರ್’ ವಿಶ್ವವಿದ್ಯಾನಿಲಯಗಳ ಉನ್ನತ ಶಿಕ್ಷಣಕ್ಕೆ ಸರಿಸಮನಾಗಿ ಮನೆ ಬಾಗಿಲಿಗೆ ಉನ್ನತ ಶಿಕ್ಷಣ ಕೊಡುವಲ್ಲಿ ಮುಂಚೂಣಿಯಲ್ಲಿದೆ. ರಾಜ್ಯದಾದ್ಯಂತ ೨೩ ಪ್ರಾದೇಶಿಕ ಕೇಂದ್ರಗಳು ಮತ್ತು ೧೪೦ ಕಲಿಕಾರ್ಥಿ ಸಹಾಯ ಕೇಂದ್ರಗಳ ಮೂಲಕ ವಿದ್ಯಾರ್ಥಿ ಸ್ನೇಹಿ ಶಿಕ್ಷಣ ಸೇವೆಯನ್ನು ಒದಗಿಸುತ್ತ ಬಂದಿರುತ್ತದೆ ಎಂದು ಮಾಹಿತಿ ನೀಡಿದರು.
ಕ.ರಾ.ಮು.ವಿ.ಯು ಯು.ಜಿ.ಸಿ. ಮಾನ್ಯತೆ ಪಡೆದಿರುವ ೬೪ ಸ್ನಾತಕ/ಸ್ನಾತಕೋತ್ತರ ಪದವಿ, ಡಿಪ್ಲೋಮಾ ಶಿಕ್ಷಣ ಕ್ರಮಗಳಿಗೆ ಪ್ರವೇಶಾತಿ ನೀಡುತ್ತಿದ್ದು ಯುಜಿಸಿ ನಿಯಮಾವಳಿ ಪ್ರಕಾರ ಪೂರ್ಣಾವಧಿಯಲ್ಲಿ (ಭೌತಿಕ ಶಿಕ್ಷಣ) ಒಂದು ಕೋರ್ಸ್ ಮತ್ತು ದೂರಶಿಕ್ಷಣದಲ್ಲಿ ಇನ್ನೊಂದು ಕೋರ್ಸ್ ಅನ್ನು ಏಕಕಾಲದಲ್ಲೇ ಮಾಡಲು ಅವಕಾಶವಿರುತ್ತದೆ ಎಂದು ವಿವರಿಸಿದರು.
ವರ್ಷ ವ್ಯಾಸಂಗ ಮಾಡಿ ಕಾರಣಾಂತರಗಳಿAದ ಶಿಕ್ಷಣ ಮುಂದು ವರೆಸಲು ಸಾಧ್ಯವಾಗದಿದ್ದರೆ, ಅಂತಹ ವಿದ್ಯಾರ್ಥಿಗಳು ಆರ್ಹತಾ ಮಾನದಂಡಗಳನ್ನು ಪೂರೈಸಿ ೨ನೇ ಮತ್ತು ೩ನೇ ವರ್ಷಕ್ಕೆ ಮುಕ್ತ ವಿವಿಯಲ್ಲಿ ಲ್ಯಾಟರಲ್ ಪ್ರವೇಶ ಅಥವಾ ನೇರ ಪ್ರವೇಶ ಅಯ್ಕೆ ಮಾಡಿಕೊಂಡು ವಿದ್ಯಾಭ್ಯಾಸ ಮುಂದುವರೆಸ ಬಹುದಾಗಿದೆ. ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಮಡಿಕೇರಿ ನಗರದಲ್ಲಿ ೨೦೨೧ರಲ್ಲಿ ಡಿಸಂಬರ್ ತಿಂಗಳಲ್ಲಿ ಪ್ರಾದೇಶಿಕ ಕೇಂದ್ರವನ್ನು ಸ್ಧಾಪಿಸುವುದರ ಮೂಲಕ ಕೊಡಗು ಜಿಲ್ಲೆಯ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ನೀಡಲು ಪ್ರಯತ್ನಿಸು ತ್ತಿದೆ. ಈ ಕೇಂದ್ರವು ಸರಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಇರುವ ಹಳೇ ಪ್ರಾಥಮಿಕ ಶಾಲೆಯಲ್ಲಿ ನಡೆಯುತ್ತಿದೆ. ಕರಾಮುವಿಯ ವಾರ್ಷಿಕ/ಸೆಮಿಸ್ಟರ್ ಪರೀಕ್ಷೆಗಳು ಮಡಿಕೇರಿಯ ಕರಾಮುವಿ ಪ್ರಾದೇಶಿಕ ಕೇಂದ್ರದಲ್ಲೇ ನಡೆಯುತ್ತವೆ. ಕರಾಮುವಿಯ ವಾರಾಂತ್ಯ ಸಂಪರ್ಕ ತರಗತಿಗಳನ್ನು ಮತ್ತು ವಿಜ್ಞಾನ ವಿಷಯ ಗಳಿಗೆ ಪ್ರಯೋಗಿಕ ತರಗತಿಗಳನ್ನು ಕಲಿಕಾರ್ಥಿ ಸಹಾಯ ಕೇಂದ್ರದಲ್ಲಿ ನಡೆಸಲು ಕ್ರಮ ವಹಿಸಲಾಗುತ್ತಿದೆ ಎಂದು ಹೇಳಿದರು.
ಪ್ರಸ್ತುತ ೨೦೨೨-೨೩ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿಯ ಪ್ರವೇಶಾತಿ ಪ್ರಕಟಣೆಯು ಪ್ರಾರಂಭ ವಾಗಿದ್ದು, ಪ್ರವೇಶಾತಿ ಪ್ರಕ್ರಿಯೆಗಳು ನಡೆಯುತ್ತಿವೆ, ಮಾರ್ಚ್ ೩೧ ಕೊನೆಯ ದಿನಾಂಕವಾಗಿರುತ್ತದೆ. ಸ್ನಾತಕ/ಸ್ನಾತಕೋತ್ತರ ಕೋರ್ಸ್ಗಳಾದ ಬಿ.ಎ/ಬಿ.ಕಾಂ/ಬಿ.ಬಿ.ಎ/ಬಿ.ಸಿ.ಎ/ಬಿ.ಎಲ್.ಐ.ಎಸ್ಸಿ ಹಾಗೂ ಬಿ.ಎಸ್ಸಿ (ಉeಟಿeಡಿಚಿಟ, ಊome Sಛಿieಟಿಛಿe, ಚಿಟಿಜ I.ಖಿ) ಎಂ.ಎ/ಎA.ಸಿ.ಜೆ/ಎA.ಕಾA., ಎಂ.ಎಲ್. ಐ.ಎಸ್ಸಿ., ಎಂ.ಎಸ್ಸಿ. ಎಂ.ಬಿ.ಎ., ಪಿ.ಜಿ. ಡಿಪ್ಲೋಮಾ ಪ್ರೋಗ್ರಾಮ್ಸ್, ಡಿಪ್ಲೋಮಾ ಪ್ರೋಗ್ರಾಮ್ಸ್, ಸರ್ಟಿಫಿಕೇಟ್ ಪ್ರೋಗ್ರಾಮ್ಸ್ಗಳಿಗೆ ಕರಾಮುವಿ ಮಡಿಕೇರಿ ಪ್ರಾದೇಶಿಕ ಕೇಂದ್ರದಲ್ಲಿ ಪ್ರವೇಶಾತಿಯನ್ನು ಮಾಡಿಕೊಳ್ಳಲಾ ಗುತ್ತಿದೆ. ವೆಬ್ಸೈಟ್ ತಿತಿತಿ.ಞsoumಥಿsuಡಿu.ಚಿಛಿ.iಟಿನಲ್ಲಿ ಏSಔU ಂಜmissioಟಿ Poಡಿಣಚಿಟ ಮೂಲಕ ಈ ಮೇಲ್ಕಂಡ ಪದವಿಗಳಿಗೆ ಅನ್ಲೈನ್ನಲ್ಲಿ ಅರ್ಜಿ ಭರ್ತಿ ಮಾಡಿ ನಂತರ ಪ್ರಾದೇಶಿಕ ಕೇಂದ್ರಕ್ಕೆ ಖುದ್ದಾಗಿ ಭೇಟಿ ನೀಡಿ ದಾಖಲಾತಿಗಳ ಪರಿಶೀಲನೆ ನಂತರ ಅನ್ಲೈನ್ ಮುಖಾಂತರ ಪ್ರವೇಶಾತಿ ಶುಲ್ಕ ಪಾವತಿಸಿ ಸಿದ್ದಪಾಠ ಗಳನ್ನು ಪಡೆಯ ಬಹುದು ಎಂದು ವಿವರಿಸಿದರು.
ಕೊಡಗು ಜಿಲ್ಲೆಯಲ್ಲಿ ಈಗಾಗಲೇ ಒಂದು ಕಲಿಕಾರ್ಥಿ ಸಹಾಯ ಕೇಂದ್ರ ವೀರಾಜಪೇಟೆಯಲ್ಲಿ ಇದ್ದು ಮುಂದಿನ ದಿನಗಳಲ್ಲಿ ಕೊಡಗು ಜಿಲ್ಲೆಯ ಪ್ರತಿ ತಾಲೂಕು ಕೇಂದ್ರಗಳಲ್ಲೂ ಕರಾಮುವಿ ಕಲಿಕಾರ್ಥಿ ಸಹಾಯ ಕೇಂದ್ರಗಳನ್ನು (ಅಧ್ಯಯನ ಕೇಂದ್ರಗಳನ್ನು) ತಾಲೂಕಿನ ಪ್ರಥಮ ದರ್ಜೆ ಕಾಲೇಜು ಗಳಲ್ಲಿ ತೆರೆಯಲು ತೀರ್ಮಾನಿಸಿದೆ ಎಂದರು.
ಗೋಷ್ಠಿಯಲ್ಲಿ ಕಾರ್ಯ ನಿರ್ವಾಹಕ ಆಭಿಯಂತರರ ಭಾಸ್ಕರ್, ಪ್ರಾದೇಶಿಕ ನಿರ್ದೇಶಕಿ ಮುಕ್ಕಾಟೀರ ಸ್ಮಿತಾ ಸುಬ್ಬಯ್ಯ ಹಾಜರಿದ್ದರು.