ಕುಶಾಲನಗರ, ಫೆ. ೧೪: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಮನ್ವಯ ಶಿಕ್ಷಣ ವಿಭಾಗದಿಂದ ವಿಶೇಷಚೇತನ ವಿದ್ಯಾರ್ಥಿಗಳಿಗೆ ಮುಳ್ಳುಸೋಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ರೀಡಾಕೂಟ ಏರ್ಪಡಿಸಲಾಗಿತ್ತು.
ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕ ರಂಗದಾಮಯ್ಯ ಅವರು ಉದ್ಘಾಟಿಸಿದರು. ಮಕ್ಕಳಿಗೆ ಜಾವಲಿನ್ ಥ್ರೋ, ಶಾಟ್ಪುಟ್, ೫೦ ಮೀ. ಓಟ ಮತ್ತಿತರ ಕ್ರೀಡೆಗಳನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ. ಸುರೇಶ್, ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಸದಾಶಿವ ಪಲ್ಯದ್, ಎಸ್ಡಿಎಂಸಿ ಅಧ್ಯಕ್ಷ ಹರೀಶ್, ಕಾವಲುಪಡೆ ಜಿಲ್ಲಾಧ್ಯಕ್ಷ ಎಂ. ಕೃಷ್ಣ, ಶಿಕ್ಷಕರ ಸಂಘದ ಪ್ರಮುಖರಾದ ಧರ್ಮಪ್ಪ, ಕುಮಾರ್, ಸರ್ಕಾರಿ ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯಿನಿ ಭಾಗ್ಯ, ಅರಣ್ಯ ಇಲಾಖೆ ಅಧಿಕಾರಿ ಪೂಜಾ ಮತ್ತಿತರರು ಇದ್ದರು.