ಕೂಡಿಗೆ, ಫೆ. ೧೪: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾರಂಗಿಯಲ್ಲಿ ೧೫೧ರ ಬಿಜೆಪಿ ಬೂತ್ ವಿಜಯ್ ಅಭಿಯಾನ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಅಂಗವಾಗಿ ಮನೆ ಮನೆ ಭೇಟಿ ನೀಡಿ ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ರಾಜ್ಯ ಸರ್ಕಾರದ ಯೋಜನೆಗಳು ಮತ್ತು ಕೇಂದ್ರ ಸರ್ಕಾರದ ಯೋಜನೆಗಳ ಮಾಹಿತಿಯ ಕರಪತ್ರವನ್ನು ಹಂಚಲಾಯಿತು. ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು ಗ್ರಾಮಕ್ಕೆ ನೀಡಿದ ಅನುದಾನದ ಬಗ್ಗೆ ಮಾಹಿತಿಯನ್ನು ತಿಳಿಸಿದರು.
ನಂತರ ಇದೇ ಸಂದರ್ಭ ಹಾರಂಗಿಯ ಪುನರ್ವಸತಿ ವ್ಯಾಪ್ತಿಯಲ್ಲಿ ಸಾರ್ವಜನಿಕರ ಸಮಸ್ಯೆಯನ್ನು ಕೂಡ ಆಲಿಸಲಾಯಿತು. ಹಲವು ಸಮಸ್ಯೆಗಳನ್ನು ಸಂಬAಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸ್ಥಳದಲ್ಲಿಯೇ ಬಗೆಹರಿಸುವ ಕಾರ್ಯವನ್ನು ನಿರ್ವಹಿಸಿದರು.
ಈ ಸಂದರ್ಭ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಭಾಸ್ಕರ್ ನಾಯಕ್, ಸದಸ್ಯರಾದ ಲಕ್ಷಿö್ಮ, ಬಿಜೆಪಿಯ ಹುಲುಗುಂದ ಗ್ರಾಮದ ಬೂತ್ ಕಮಿಟಿ ಅಧ್ಯಕ್ಷ ಶರತ್, ಕಾರ್ಯದರ್ಶಿ ಗಿರೀಶ್, ಪ್ರದೀಪ್, ಸೇರಿದಂತೆ ಹಾರಂಗಿ ವ್ಯಾಪ್ತಿಯ ವಿವಿಧ ಘಟಕದ ಪದಾಧಿಕಾರಿಗಳು ಹಾಜರಿದ್ದರು.