ನಾಪೋಕ್ಲು, ಫೆ. ೧೪: ಸಮೀಪದ ಮೂರ್ನಾಡು ಪದವಿಪೂರ್ವ ಕಾಲೇಜಿನ ರಾಷ್ಟಿçÃಯ ಸೇವಾ ಯೋಜನೆ ಘಟಕದ ವತಿಯಿಂದ ಹದಿಹರೆಯದ ಹೆಣ್ಣು ಮಕ್ಕಳಿಗೆ ಅರಿವು ಕಾರ್ಯಕ್ರಮ ನಡೆಸಲಾಯಿತು. ಹದಿಹರೆಯದಲ್ಲಿ ಹೆಣ್ಣು ಮಕ್ಕಳ ಸಮಸ್ಯೆಗಳು, ಅವುಗಳಿಗೆ ಪರಿಹಾರ, ದೈಹಿಕ ಬದಲಾವಣೆ, ಖಾಸಗಿ ಶುಚಿತ್ವ ಇವುಗಳ ಕುರಿತು ಪ್ರೊಜೆಕ್ಟರ್ ಮೂಲಕ ಕಿರು ಚಿತ್ರ ಪ್ರದರ್ಶನ ಮಾಡಿ ಅರಿವು ಮೂಡಿಸಲಾಯಿತು. ಆರೋಗ್ಯಾಧಿಕಾರಿಗಳಾದ ಶ್ರೀನಾಥ್ ಮತ್ತು ಪಾಲಾಕ್ಷ ವಿದ್ಯಾರ್ಥಿನಿಯರಿಗೆ ಮಾರ್ಗದರ್ಶನ ಮಾಡಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲೆ ದೇವಕಿ, ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ದಮಯಂತಿ, ಮೂರ್ನಾಡು ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.